ದಿಲೀಪ್ ಶಂಕರ್
ತಿರುವನಂತಪುರಂ: ಮಲಯಾಳಂ ಸಿನಿಮಾ ಹಾಗೂ ಕಿರುತೆರೆ ನಟ ದಿಲೀಪ್ ಶಂಕರ್ ಇಲ್ಲಿನ ಹೋಟೆಲ್ ಕೊಠಡಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
'ಪಂಚಾಗ್ನಿ' ಧಾರಾವಾಹಿಯ ಚಿತ್ರೀಕರಣಕ್ಕಾಗಿ ದಿಲೀಪ್ ಶಂಕರ್ ಇಲ್ಲಿಗೆ ಆಗಮಿಸಿದ್ದರು. ಎರಡು ದಿನಗಳ ಹಿಂದಷ್ಟೆ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು ಎಂದು ಚಿತ್ರತಂಡದವರು ಹೇಳಿದ್ದಾರೆ.
ದಿಲೀಪ್ ಶಂಕರ್ ಹೊಟೇಲ್ ಕೊಠಡಿಯಿಂದ ಎರಡು ದಿನಗಳಿಂದ ಹೊರಗಡೆ ಬಂದಿಲ್ಲ. ಕೊಠಡಿಯಿಂದ ದುರ್ವಾಸನೆ ಬಂದ ಹಿನ್ನೆಲೆ ಪರಿಶೀಲನೆ ನಡೆಸಿದಾಗ ಅವರ ಮೃತದೇಹ ಪತ್ತೆಯಾಗಿದೆ ಎಂದು ಹೊಟೇಲ್ ಸಿಬ್ಬಂದಿಗಳು ಮಾಹಿತಿ ನೀಡಿದ್ದಾರೆ.
ಘಟನೆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮಲಯಾಳಂನ ಹಲವು ಸಿನಿಮಾ ಹಾಗೂ ಜನಪ್ರಿಯ ಧಾರಾವಾಹಿಗಳಲ್ಲಿ ಅವರು ನಟಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.