ADVERTISEMENT

ಮಲಯಾಳಂನ ಹಿರಿಯ ನಟ ಉನ್ನಿಕೃಷ್ಣನ್‌ ನಂಬೂದಿರಿ ನಿಧನ

​ಪ್ರಜಾವಾಣಿ ವಾರ್ತೆ
Published 21 ಜನವರಿ 2021, 7:09 IST
Last Updated 21 ಜನವರಿ 2021, 7:09 IST
ಉನ್ನಿಕೃಷ್ಣನ್‌ ನಂಬೂದರಿ
ಉನ್ನಿಕೃಷ್ಣನ್‌ ನಂಬೂದರಿ   

ಮಲಯಾಳಂನ ಹಿರಿಯ ನಟ ಉನ್ನಿಕೃಷ್ಣನ್ ನಂಬೂದಿರಿ ಕಣ್ಣೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 98 ವರ್ಷ ವಯಸ್ಸಾಗಿತ್ತು.

ಇತ್ತೀಚೆಗೆ ಅವರಿಗೆ ಕೋವಿಡ್‌ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು. ಅದಕ್ಕಾಗಿ ಕೆಲ ದಿನಗಳ ಕಾಲ ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದಿದ್ದರು. ಮಂಗಳವಾರ ಪರೀಕ್ಷೆಯಲ್ಲಿ ನೆಗೆಟಿವ್ ಬಂದ ಕಾರಣ ಅವರನ್ನು ಮನೆಗೆ ಕಳುಹಿಸಲಾಗಿತ್ತು. ಬುಧವಾರ ಬೆಳಿಗ್ಗೆ ಅವರಿಗೆ ಉಸಿರಾಟದಲ್ಲಿ ಸಮಸ್ಯೆ ಕಾಣಿಸಿಕೊಂಡ ಕಾರಣ ಮರಳಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಇವರ ಸಾವಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸೇರಿದಂತೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.