ADVERTISEMENT

ಪತ್ನಿ ಶಾಲಿನಿ ಮಾಡಿರುವ ಆರೋಪ‌ದಲ್ಲಿ ಹುರುಳಿಲ್ಲ –ಹನಿ ಸಿಂಗ್

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2021, 13:26 IST
Last Updated 7 ಆಗಸ್ಟ್ 2021, 13:26 IST
ಹನಿ ಸಿಂಗ್
ಹನಿ ಸಿಂಗ್   

ಪತ್ನಿ ಶಾಲಿನಿ ಮಾಡಿರುವ ಆರೋದಲ್ಲಿ ಯಾವುದೇ ಹುರುಳಿಲ್ಲ ಎಂದುಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕಯೋ ಯೋ ಹನಿ ಸಿಂಗ್‌ ಹೇಳಿದ್ದಾರೆ.

ಸಾಮಾಜಿಕ ಜಾಲತಾಣದ ಮೂಲಕ ಹನಿ ಸಿಂಗ್‌ ಸ್ಪಷ್ಟನೆ ನೀಡಿದ್ದು ಶಾಲಿನಿ ತಲ್ವಾರ್‌ ಅವರ ಆರೋಪ ದುರುದ್ದೇಶದಿಂದ ಕೂಡಿದೆ ಎಂದು ಹೇಳಿದ್ದಾರೆ.

ಶಾಲಿನಿ ತಲ್ವಾರ್ ಕೌಟುಂಬಿಕ ದೌರ್ಜನ್ಯ ಕಾಯ್ದೆ ಅಡಿ ಹನಿ ಸಿಂಗ್‌ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದರು. ದೂರಿನಲ್ಲಿ ಮಾನಸಿಕ ಕಿರುಕುಳ, ದೈಹಿಕ ಹಲ್ಲೆ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ADVERTISEMENT

ಕಳೆದ 20 ವರ್ಷಗಳಿಂದ ನನ್ನ ಮತ್ತು ನಮ್ಮ ಕುಟುಂಬದ ಜತೆಯಲ್ಲಿರುವ ಶಾಲಿನಿ ನನ್ನ ವಿರುದ್ಧ ಮಾಡಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ, ಅವರು ದುರುದ್ದೇಶದಿಂದ ಸುಳ್ಳು ಆರೋಪ ಮಾಡಿದ್ದರೆ. ಈ ಘಟನೆ ನನ್ನ ಮನಸ್ಸಿಗೆ ತೀವ್ರ ನೋವುಂಟ ಮಾಡಿದೆ ಎಂದು ಹೇಳಿದ್ದಾರೆ.

ನನ್ನ ವೃತ್ತಿ ಬದುಕಿನಲ್ಲಿ ಎದುರಿಸಿದ ಆರೋಪ ಅಥವಾ ವಿವಾದಗಳಿಗೆ ನಾನು ಎಂದೂ ಪ್ರತಿಕ್ರಿಯೆ ನೀಡಿರಲಿಲ್ಲ ಆದರೆ ಶಾಲಿನಿ ನನ್ನ ಕುಟುಂಬದವರು ಬಗ್ಗೆ ಆರೋಪ ಮಾಡಿದಾಗ ನನ್ನಿಂದ ಸುಮ್ಮನಿರಲು ಸಾಧ್ಯವಾಗಲಿಲ್ಲ ಎಂದು ಪೋಸ್ಟ್‌ನಲ್ಲಿ ಹೇಳಿದ್ದಾರೆ.

ದೇಶದ ಕಾನೂನು ವ್ಯವಸ್ಥೆ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಸಾಧ್ಯವಾದಷ್ಟು ಬೇಗ ಸತ್ಯಾಂಶ ಹೊರಗೆ ಬರಲಿ ಎಂದು ದೇವರಲ್ಲಿ ಬೇಡುತ್ತೇನೆ. ನ್ಯಾಯಾಲಯ ಕೂಡ ನನ್ನ ಹೇಳಿಕೆ ದಾಖಲಿಸಲು ಅವಕಾಶ ಕೊಟ್ಟಿದೆ. ಅಭಿಮಾನಿಗಳು ಹಾಗೂ ಜನರು ಈಗಲೇ ನನ್ನ ಕುಟುಂಬದ ಬಗ್ಗೆ ಅಂತಿಮ ತೀರ್ಮಾನಕ್ಕೆ ಬರಬರಾದು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.