ADVERTISEMENT

ಫೆಬ್ರುವರಿ 25ಕ್ಕೆ ಪವನ್ ಕಲ್ಯಾಣ್ ಅಭಿನಯದ ‘ಭಿಮ್ಲಾ ನಾಯಕ್' ತೆರೆಗೆ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2021, 7:02 IST
Last Updated 21 ಡಿಸೆಂಬರ್ 2021, 7:02 IST
ಪವನ್‌, ರಾಣಾ
ಪವನ್‌, ರಾಣಾ   

ಹೈದರಾಬಾದ್: ನಟ ಪವನ್ ಕಲ್ಯಾಣ್ ಅವರ ಬಹುನಿರೀಕ್ಷಿತ ‘ಭಿಮ್ಲಾ ನಾಯಕ್' ಸಿನಿಮಾ ಮುಂದಿನ ವರ್ಷ ಫೆಬ್ರುವರಿ 25ಕ್ಕೆ ತೆರೆಗೆ ಬರಲಿದೆ ಎಂದು ಟಾಲಿವುಡ್‌ ಮೂಲಗಳು ತಿಳಿಸಿವೆ.

ಈ ಮೊದಲು ಸಿನಿಮಾ 2022ರ ಜನವರಿ 12ರಂದು ತೆರೆಗೆ ಬರಲಿದೆ ಎಂದು ನಿರ್ಮಾಪಕರು ಹೇಳಿದ್ದರು. ಸದ್ಯ ಸಿನಿಮಾ ಜನವರಿಯಲ್ಲಿ ಬಿಡುಗಡೆಯಾಗುವುದಿಲ್ಲ ಎಂದು ಖಚಿತಪಡಿಸಿದ್ದಾರೆ.

ಜನವರಿ ಮೊದಲಎರಡು ವಾರಗಳಲ್ಲಿ ಸ್ಟಾರ್‌ ನಟರ ಸಿನಿಮಾಗಳು ತೆರೆಗೆ ಬರುವುದರಿಂದ’ಭಿಮ್ಲಾ ನಾಯಕ್‌’ ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿದೆ.

ADVERTISEMENT

ಈ ವೇಳೆ ಆರ್‌ಆರ್‌ಆರ್‌, ರಾಧೆ–ಶ್ಯಾಮ್‌ ಸಿನಿಮಾಗಳು ಬಿಡುಗಡೆಯಾಗಲಿವೆ. ಹಾಗೇ ಮಹೇಶ್ ಬಾಬು ಸಿನಿಮಾ ಕೂಡ ಬಿಡುಗಡೆಯಾಗುವುದರಿಂದ ನಿರ್ಮಾಪಕರು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಆದರೆ ಸಿನಿಮಾ ಬಿಡುಗಡೆ ದಿನಾಂಕ ಇನ್ನು ಅಧಿಕೃತವಾಗಿ ಘೋಷಣೆಯಾಗಬೇಕಿದೆ.

ಮಲೆಯಾಳಂನ ಸೂಪರ್ ಹಿಟ್ ‘ಅಯ್ಯಪ್ಪನ್ ಕೋಶಿಯಂ‘ ಸಿನಿಮಾದ ರಿಮೇಕ್ ಆಗಿರುವ 'ಭಿಮ್ಲಾ ನಾಯಕ್‌' ಸಿನಿಮಾವನ್ನು ಸಾಗರ್ ಕೆ ಚಂದ್ರಾ ಅವರು ನಿರ್ದೇಶಿಸಿದ್ದಾರೆ.

ಪವನ್ ಕಲ್ಯಾಣ್, ರಾಣಾ ದಗ್ಗುಭಾಟಿ, ನಿತ್ಯಾ ಮೆನನ್, ಸಂಯುಕ್ತಾ ಮೆನನ್ ಪ್ರಮುಖ ತಾರಾಗಣದಲ್ಲಿದ್ದಾರೆ. ಸಿತಾರಾ ಎಂಟರಟೈನ್‌ಮೆಂಟ್ ಸಂಸ್ಥೆ ಈ ಚಿತ್ರವನ್ನು ನಿರ್ಮಾಣ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.