ADVERTISEMENT

ನಟ ಸುದೀಪ್ ಅಕ್ಕನ ಮಗ ಸಂಚಿತ್ ನಟನೆಯ ಮ್ಯಾಂಗೋ ಪಚ್ಚ ಚಿತ್ರದ ಮೊದಲ ಹಾಡು ಬಿಡುಗಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ನವೆಂಬರ್ 2025, 10:51 IST
Last Updated 26 ನವೆಂಬರ್ 2025, 10:51 IST
<div class="paragraphs"><p>ನಟ&nbsp;ಸಂಚಿತ್‌</p></div>

ನಟ ಸಂಚಿತ್‌

   

ಚಿತ್ರ: ಇನ್‌ಸ್ಟಾಗ್ರಾಮ್

ನಟ ಸುದೀಪ್‌ ಅಕ್ಕನ ಮಗ ಸಂಚಿತ್‌ ನಟನೆಯ ಹೊಸ ಸಿನಿಮಾ ‘ಮ್ಯಾಂಗೋ ಪಚ್ಚ’ದ ಮೊದಲ ಹಾಡು ಬಿಡುಗಡೆಯಾಗಿದೆ. ಇತ್ತೀಚೆಗೆ ಸುದೀಪ್‌ ಅವರೇ ಸಂಚಿತ್‌ ನಟನೆಯ ಮ್ಯಾಂಗೋ ಪಚ್ಚ ಚಿತ್ರದ ಟೀಸರ್‌ ರಿಲೀಸ್‌ ಮಾಡಿದ್ದರು.

ADVERTISEMENT

ಇದೀಗ ಸರೆಗಮ ಯ್ಯೂಟೂಬ್ ಚಾನೆಲ್‌ನಲ್ಲಿ ಮ್ಯಾಂಗೋ ಪಚ್ಚ ಸಿನಿಮಾದ ಮೊದಲ ‘ಹಸ್ರವ್ವ’ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಇನ್ನು, ‘ಮ್ಯಾಂಗೋ ಪಚ್ಚ’ ಮೈಸೂರು ಭಾಗದ ಕಥೆಯಾಗಿದೆ. ಕ್ರೈಂ ಥ್ರಿಲ್ಲರ್ ಸಿನಿಮಾ ಇದಾಗಿದ್ದು, ಬಹುತೇಕ ಚಿತ್ರೀಕರಣ ಮೈಸೂರಿನಲ್ಲೇ ಮಾಡಲಾಗಿದೆ. ಮಾಸ್ ಎಂಟರ್‌ಟೇನ್ಮೆಂಟ್‌ ಸಿನಿಮಾವನ್ನು ವಿವೇಕ್‌ ನಿರ್ದೇಶಿಸಿದ್ದಾರೆ. ಇದು ಅವರ ಚೊಚ್ಚಲ ಸಿನಿಮಾ ಆಗಿದೆ.

2001ರಿಂದ 2011ರ ಅವಧಿಯಲ್ಲಿ ನಡೆದ ಪ್ರಮುಖ ಘಟನೆಗಳು ಈ ಸಿನಿಮಾದಲ್ಲಿದೆ ಎಂದು ಚಿತ್ರತಂಡ ತಿಳಿಸಿದೆ. ಚಿತ್ರವನ್ನು ಕೆಆರ್‌ಜಿ ಮತ್ತು ಸುದೀಪ್ ಅವರ ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಾಣ ಮಾಡುತ್ತಿವೆ. ಸಂಚಿತ್‌ ಮೊದಲ ಸಿನಿಮಾದಲ್ಲಿ ನಾಯಕಿಯಾಗಿ ಕಾಜಲ್ ಕುಂದರ್ ಬಣ್ಣಹಚ್ಚಿದ್ದಾರೆ. ಮಯೂರ್ ಪಟೇಲ್, ವಿಜಯ ರಾಘವೇಂದ್ರ ಅವರ ಅಕ್ಕನ ಮಗ ಜೇಯ್, ‘ಬಿಗ್‌ಬಾಸ್’ ಖ್ಯಾತಿಯ ಹಂಸ, ಮಾಲಾಶ್ರೀ ಸೇರಿದಂತೆ ದೊಡ್ಡ ತಾರಾಬಳಗವೇ ಚಿತ್ರದಲ್ಲಿದೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ, ಶೇಖರ್‌ ಚಂದ್ರ ಛಾಯಾಚಿತ್ರಗ್ರಹಣ, ವಿಶ್ವಾಸ್ ಕಲಾ ನಿರ್ದೇಶನವಿದೆ. ಜ.15ಕ್ಕೆ ಈ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.