ADVERTISEMENT

Sankranti Release: ಜ.15ಕ್ಕೆ ‘ಮ್ಯಾಂಗೋ ಪಚ್ಚ’ ರಿಲೀಸ್‌

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2025, 0:30 IST
Last Updated 18 ನವೆಂಬರ್ 2025, 0:30 IST
ಸಂಚಿತ್‌ 
ಸಂಚಿತ್‌    

ಸಂಕ್ರಾಂತಿಗೆ ಕನ್ನಡದ ಸಿನಿಮಾಗಳು ತೆರೆಕಾಣುವುದು ಅಪರೂಪ. ಪರಭಾಷಾ ಸಿನಿಮಾಗಳೇ ಈ ದಿನಗಳಲ್ಲಿ ತೆರೆ ತುಂಬಿಕೊಳ್ಳುತ್ತಿದ್ದವು. ಆದರೆ ಈ ಬಾರಿ ನಟ ಸುದೀಪ್‌ ಅಕ್ಕನ ಮಗ ಸಂಚಿತ್‌ ನಟನೆಯ ಹೊಸ ಸಿನಿಮಾ ‘ಮ್ಯಾಂಗೋ ಪಚ್ಚ’ ಸಂಕ್ರಾಂತಿ ಸಂದರ್ಭದಲ್ಲೇ ರಿಲೀಸ್‌ ಆಗಲಿದೆ. 

ಜ.15ಕ್ಕೆ ಈ ಸಿನಿಮಾ ತೆರೆಕಾಣಲಿದ್ದು, ಸಂಚಿತ್‌ ಚಂದನವನದಲ್ಲಿ ನಾಯಕನಾಗಿ ಮೊದಲ ಹೆಜ್ಜೆ ಇಡಲಿದ್ದಾರೆ. ‘ಮ್ಯಾಂಗೋ ಪಚ್ಚ’ ಮೈಸೂರು ಭಾಗದ ಕಥೆಯಾಗಿದ್ದು, ಸಂಚಿತ್ ರೆಟ್ರೋ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಕ್ರೈಂ ಥ್ರಿಲ್ಲರ್ ಜಾನರ್‌ನಲ್ಲಿ ಸಿನಿಮಾವಿದ್ದು, ವಿವೇಕ್‌ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. 2001ರಿಂದ 2011ರ ಅವಧಿಯಲ್ಲಿ ನಡೆದ ಪ್ರಮುಖ ಘಟನೆಗಳು ಈ ಸಿನಿಮಾದಲ್ಲಿದ್ದು, ಚಿತ್ರವನ್ನು ಕೆಆರ್‌ಜಿ ಮತ್ತು ಸುದೀಪ್ ಅವರ ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಾಣ ಮಾಡಿದೆ. ಈಗಾಗಲೇ ಚಿತ್ರೀಕರಣ ಪೂರ್ಣಗೊಳಿಸಿರುವ ಈ ಸಿನಿಮಾದಲ್ಲಿ ನಾಯಕಿಯಾಗಿ ಕಾಜಲ್ ಕುಂದರ್ ಬಣ್ಣಹಚ್ಚಿದ್ದಾರೆ. ಮಯೂರ್ ಪಟೇಲ್, ವಿಜಯ ರಾಘವೇಂದ್ರ ಅವರ ಅಕ್ಕನ ಮಗ ಜೇಯ್, ‘ಬಿಗ್‌ಬಾಸ್’ ಖ್ಯಾತಿಯ ಹಂಸ, ಮಾಲಾಶ್ರೀ ಸೇರಿದಂತೆ ದೊಡ್ಡ ತಾರಾಬಳಗವೇ ಚಿತ್ರದಲ್ಲಿದೆ.

‘ಮ್ಯಾಂಗೋ ಪಚ್ಚ’ ಸಿನಿಮಾದ ಆಡಿಯೊ ಹಕ್ಕುಗಳು ₹1.2 ಕೋಟಿಗೆ ಮಾರಾಟವಾಗಿದೆ ಎಂದು ಚಿತ್ರತಂಡ ತಿಳಿಸಿದೆ. ಚೊಚ್ಚಲ ಹೀರೊ ಒಬ್ಬರ ಸಿನಿಮಾದ ಆಡಿಯೊ ಇಷ್ಟು ಮೊತ್ತಕ್ಕೆ ಮಾರಾಟವಾಗಿರುವುದು ದಾಖಲೆ ಎಂದೂ ಚಿತ್ರತಂಡ ತಿಳಿಸಿದೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ, ಶೇಖರ್‌ ಚಂದ್ರ ಛಾಯಾಚಿತ್ರಗ್ರಹಣ, ವಿಶ್ವಾಸ್ ಕಲಾ ನಿರ್ದೇಶನವಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.