ಮುಂಬೈ: ಆ್ಯಂಬುಲೆನ್ಸ್ ಸಿಗದೆ ಗರ್ಭಿಣಿಯನ್ನು ಬೈಕ್‌ನಲ್ಲಿ ಕರೆದೊಯ್ದದ್ದು, ಹೆಗಲ ಮೇಲೆ ಶವ ಹೊತ್ತು ಸಾಗಿದ, ಅನಾರೋಗ್ಯ ಪೀಡಿತ ಪತಿಯನ್ನುಎತ್ತಿನಗಾಡಿಯಲ್ಲಿ ಆಸ್ಪತ್ರೆಗೆ ಕರೆದೊಯ್ದ ಘಟನೆಗಳು ಮಾಸುವ ಮುನ್ನವೇ, ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಸಿಗದೆ ನಟಿ ಹಾಗೂ ಆಕೆಯ ಮಗು ಮೃತಪಟ್ಟಘಟನೆಹಿಂಗೊಲಿ ಜಿಲ್ಲೆಯಲ್ಲಿ ನಡೆದಿದೆ.
ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಸಿಗದಿದ್ದರಿಂದ 25 ವರ್ಷದ ಮರಾಠಿ ನಟಿಪುಜಾ ಜುಂಜಾರ್ ಮೃತಪಟ್ಟಿದ್ದಾರೆ. ಭಾನುವಾರ ಬೆಳಿಗ್ಗೆ ಮುಂಬೈನಿಂದ ಸುಮಾರು 600 ಕಿ.ಮೀ ದೂರದಲ್ಲಿರುವ ಹಿಂಗೊಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
‘ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ಸಿಕ್ಕಿದಿದ್ದರೆ, ಆಕೆ ಬದುಕಿರುತ್ತಿದ್ದಳು’ ಎಂದುನಟಿ ಪುಜಾ ಜುಂಜಾರ್ ಸಂಬಂಧಿಕರು ಬೇಸರ ವ್ಯಕ್ತಪಡಿಸಿದ್ದಾರೆ.
‘ಜುಂಜಾರ್‌ಗೆ ಮಧ್ಯರಾತ್ರಿ 2 ಗಂಟೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಗೊರೆಗಾಂವ್‌ನಲ್ಲಿನ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಆದರೆ, ಹೆರಿಗೆಯಾದ ಮರುಕ್ಷಣವೇ ಮಗು ಮೃತಪಟ್ಟಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
‘ಪ್ರಾಥಮಿಕ ಚಿಕಿತ್ಸಾ ಕೇಂದ್ರದ ವೈದ್ಯರು, ಜುಂಜಾರ್ ಅನ್ನು ತಕ್ಷಣ ಹಿಂಗೊಲಿಯಲ್ಲಿನ ಆಸ್ಪತ್ರೆಗೆ ಕರೆದೊಯ್ಯಲು ಆಕೆಯ ಕುಟುಂಬ ಸದಸ್ಯರಿಗೆ ತಿಳಿಸಿದರು. ಅಲ್ಲಿಂದ 40 ಕಿ.ಮೀ ದೂರದಲ್ಲಿನ ಆಸ್ಪತ್ರೆಗೆ ಹೋಗಲು ಆ್ಯಂಬುಲೆನ್ಸ್‌ಗಾಗಿ ಕುಟುಂಬದವರು ಸಾಕಷ್ಟು ಪರದಾಡಿದರು. ಕಷ್ಟಪಟ್ಟು ಖಾಸಗಿ ಆ್ಯಂಬುಲೆನ್ಸ್ ಮಾಡಿ, ಕರೆದೊಯ್ಯುತ್ತಿರುವಾಗ ಮಾರ್ಗ ಮಧ್ಯೆ ಜುಂಜಾರ್ ಮೃತಪಟ್ಟಿದ್ದಾರೆ’ ಎಂದು ಹೇಳಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.