
ಮಾರ್ಕ್ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಮಾಜಿ ಬಿಗ್ಬಾಸ್ ಸ್ಪರ್ಧಿ, ನಟ ಉಗ್ರಂ ಮಂಜು ಅವರು ಭಾಗವಹಿಸುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಮಾರ್ಕ್ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಇದೇ ಡಿಸೆಂಬರ್ 20ರಂದು ಸಂಜೆ 6 ಗಂಟೆಗೆ ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ನಡೆಯಲಿದೆ.
ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಚಿತ್ರವು ಡಿಸೆಂಬರ್ 25 ಕ್ರಿಸ್‌ಮಸ್ ಹಬ್ಬದಂದು ಬಿಡುಗಡೆಯಾಗಲಿದೆ. ಈಗಾಗಲೇ ಈ ಚಿತ್ರದ ಟ್ರೇಲರ್ ಹಾಗೂ ‘ಮಸ್ತ್ ಮಲೈಕಾ’ ಹಾಡು ಬಿಡುಗಡೆಯಾಗಿ ಪ್ರೇಕ್ಷಕರ ಗಮನ ಸೆಳೆದಿದೆ.
ಇನ್ನೂ ಈ ಚಿತ್ರದ ‘ಮಸ್ತ್ ಮಲೈಕಾ’ ಹಾಡನ್ನು ಸುದೀಪ್ ಪುತ್ರಿ ಸಾನ್ವಿ ಅವರು ಹಾಡಿಗೆ ಧ್ವನಿ ನೀಡಿದ್ದರೆ, ನಿಶ್ವಿಕಾ ನಾಯ್ಡು , ಕಿಚ್ಚ ಸೇರಿದಂತೆ ಅನೇಕರು ಹೆಜ್ಜೆ ಹಾಕಿದ್ದಾರೆ.
'ಸತ್ಯಜ್ಯೋತಿ ಫಿಲ್ಫ್' ಮತ್ತು 'ಕಿಚ್ಚ ಕ್ರಿಯೇಷನ್ಸ್' ಮೂಲಕ 'ಮಾರ್ಕ್' ಸಿನಿಮಾ ನಿರ್ಮಾಣಗೊಂಡಿದೆ. ತಮಿಳು ಚಿತ್ರರಂಗದ ಖ್ಯಾತ ನಟ ಯೋಗಿಬಾಬು, ಮಲಯಾಳದ ಶೈನ್ ಟಾಮ್ ಚಾಕೋ ಸೇರಿದಂತೆ ಹಲವು ಪ್ರಮುಖ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ, ಶೇಖರ್ ಚಂದ್ರ ಅವರ ಛಾಯಾಚಿತ್ರವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.