ADVERTISEMENT

‘ಮಾರ್ನಮಿ’ ಚಿತ್ರದ ಟ್ರೇಲರ್‌ ಬಿಡುಗಡೆ: ಪ್ರೇಕ್ಷಕರ ಗಮನ ಸೆಳೆದ ನಟ ಸುದೀಪ್ ಧ್ವನಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ನವೆಂಬರ್ 2025, 11:46 IST
Last Updated 13 ನವೆಂಬರ್ 2025, 11:46 IST
   

'ಗಿಣಿರಾಮ', 'ನಿನಗಾಗಿ' ಧಾರಾವಾಹಿಗಳ ಮೂಲಕ ಖ್ಯಾತಿ ಪಡೆದಿರುವ ನಟ ರಿತ್ವಿಕ್ ಹಾಗೂ ನಾಯಕಿಯಾಗಿ ಚೈತ್ರಾ ಆಚಾರ್ ನಟಿಸಿರುವ ‘ಮಾರ್ನಮಿ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

ಈ ಚಿತ್ರವು ಕರಾವಳಿ ಭಾಗದ ಕಥೆಯಾಗಿದ್ದು, ಗ್ಯಾಂಗ್‌ಗಳ ನಡುವಿನ ಗಲಾಟೆ, ಅದರ ನಡುವೆಯೊಂದು ಪ್ರೇಮಕಥೆಯನ್ನು ಒಳಗೊಂಡಿದೆ.

ಇನ್ನು, ಈ ಚಿತ್ರದ ಕಥೆಯ ಮಧ್ಯೆದಲ್ಲಿ ನಟ ಕಿಚ್ಚ ಸುದೀಪ್ ಅವರ ರಗಡ್ ಧ್ವನಿಯಲ್ಲಿ ಬರುವ ಸಂದೇಶವು ಪ್ರೇಕ್ಷಕರ ಗಮನ ಸೆಳೆದಿದೆ.

ADVERTISEMENT

ನಿಶಾಂತ್ ಈ ಸಿನಿಮಾ ನಿರ್ಮಾಣ ಮಾಡಿದ್ದರೆ, ರಿಶಿತ್ ಶೆಟ್ಟಿ ಈ ಚಿತ್ರಕ್ಕೆ ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವು ನವೆಂಬರ್ 21ರಂದು ತೆರೆ ಕಾಣಲಿದೆ.

ಸುಮನ್ ತಲ್ವಾರ್, ಪ್ರಕಾಶ್ ತುಮಿನಾಡು, ಸೋನು ಗೌಡ, ಜ್ಯೋತೀಶ್ ಶೆಟ್ಟಿ, ರೋಚಿತ್, ಸ್ವರಾಜ್ ಶೆಟ್ಟಿ, ಮೈಮ್ ರಾಮದಾಸ್ ಹಾಗೂ ಚೈತ್ರಾ ಶೆಟ್ಟಿ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ಶಿವಸೇನ ಛಾಯಾಚಿತ್ರಗ್ರಹಣ, ಚರಣ್‌ ರಾಜ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.