ADVERTISEMENT

ಮಗಳ ಮದುವೆ ಸಂಭ್ರಮದಲ್ಲಿ ನಟ ರಮೇಶ್ ಅರವಿಂದ್‌

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2020, 16:37 IST
Last Updated 24 ಡಿಸೆಂಬರ್ 2020, 16:37 IST
ರಮೇಶ್ ಅರವಿಂದ್ ಮಗಳ ಮದುವೆ ಸಂಭ್ರಮ
ರಮೇಶ್ ಅರವಿಂದ್ ಮಗಳ ಮದುವೆ ಸಂಭ್ರಮ   

ಚಂದನವನದ ಖ್ಯಾತ ನಟ ರಮೇಶ್ ಅರವಿಂದ್ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟಿದೆ. ರಮೇಶ್ ಹಾಗೂ ಅರ್ಚನಾ ದಂಪತಿಗಳ ‍ಪುತ್ರಿ ನಿಹಾರಿಕಾ ವಿವಾಹ ಅಕ್ಷಯ್ ಅವರೊಂದಿಗೆ ಡಿಸೆಂಬರ್ 28 ರಂದು ನಡೆಯಲಿದೆ.

ನಿಹಾರಿಕಾ ಹಾಗೂ ಅಕ್ಷಯ್ ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಈಗ ನವಜೀವನಕ್ಕೆ ಅಡಿಯಿಡುತ್ತಿದ್ದಾರೆ.

ಇವರ ವಿವಾಹ ಮಹೋತ್ಸವ ಕಾರ್ಯಕ್ರಮವು ಎರಡು ಕುಟುಂಬಗಳ ಸದಸ್ಯರ ಸಮ್ಮುಖದಲ್ಲಿ ಕೋವಿಡ್–19 ನಿಯಮಾನುಸಾರ ನಡೆಯಲಿದೆ.

ADVERTISEMENT

ಜನವರಿ ಎರಡನೇ ವಾರದಲ್ಲಿ ಆರತಕ್ಷತೆ ಆಯೋಜಿಸಲಾಗಿದ್ದು, ಅಂದು ಚಿತ್ರರಂಗ‌ ಸೇರಿದಂತೆ ಎಲ್ಲಾ ಕ್ಷೇತ್ರಗಳ ಗಣ್ಯರನ್ನು ಆಹ್ವಾನಿಸಲಾಗುತ್ತಿದೆ.

‘ನಾನು ಚಿತ್ರರಂಗಕ್ಕೆ ಬಂದ ದಿನದಿಂದಲೂ‌ ಕರ್ನಾಟಕದ ಜನತೆ, ಚಿತ್ರರಸಿಕರು ಹಾಗೂ ಮಾಧ್ಯಮದವರು ನೀಡಿರುವ ಪ್ರೋತ್ಸಾಹ ಅಷ್ಟಿಷ್ಟಲ್ಲ.‌ ನಿಮ್ಮ ಪ್ರೀತಿಯ ಆಶೀರ್ವಾದ ಮದುಮಕ್ಕಳ ಮೇಲೆ ಸದಾ ಇರಲಿ’ ಎಂದು ರಮೇಶ್ ಅರವಿಂದ್ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.