ADVERTISEMENT

ರಾಧೆಯಾಗಿ ಮಯೂರಿ ನಟರಾಜ್

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2023, 23:00 IST
Last Updated 16 ಏಪ್ರಿಲ್ 2023, 23:00 IST
   

ಇತ್ತೀಚೆಗಷ್ಟೇ ಬಿಡುಗಡೆಗೊಂಡ ಧನಂಜಯ್ ಅಭಿನಯದ ‘ಗುರುದೇವ್ ಹೊಯ್ಸಳ’ ಚಿತ್ರದಲ್ಲಿ ‘ಭೂಮಿ’ ಪಾತ್ರದ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು ಮಯೂರಿ ನಟರಾಜ್. ಈಗ ನಟ ರಕ್ಷಿತ್‌ ಶೆಟ್ಟಿಯವರ ಪರಂವಾ ಸ್ಟುಡಿಯೋಸ್‌ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರಕ್ಕೆ ಎರಡನೆಯ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಚಿತ್ರದಲ್ಲಿ ಅವರ ಪಾತ್ರದ ಹೆಸರು ರಾಧೆ. ಚಿತ್ರತಂಡ ಮಯೂರಿ ಪಾತ್ರ ಪರಿಚಯಿಸುವ ಪೋಸ್ಟರ್‌ ಅನ್ನು ಬಿಡುಗಡೆಗೊಳಿಸಿದೆ. ಚಂದ್ರಜಿತ್ ಬೆಳ್ಳಿಯಪ್ಪ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರವು ಇದೀಗ ಮುಕ್ತಾಯ ಹಂತದಲ್ಲಿದೆ. ಈಗಾಗಲೇ ಮಯೂರಿ ನಟರಾಜ್ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ’ಎಂದು ಚಿತ್ರತಂಡ ಹೇಳಿದೆ.
ಮಯೂರಿ ಇದಕ್ಕೂ ಮೊದಲು ‘ಮ್ಯಾನ್ ಆಫ್ ದಿ ಮ್ಯಾಚ್’, ‘ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ’ ಚಿತ್ರಗಳಲ್ಲಿ ನಟಿಸಿದ್ದರು. ‘ಇಬ್ಬನಿ ತಬ್ಬಿದ ಇಳೆಯಲಿ’ ಮೂರು ವಿಭಿನ್ನ ಕಾಲಘಟ್ಟದಲ್ಲಿ ನಡೆಯುವ ಚಿತ್ರವಾಗಿದೆ. ವಿಹಾನ್ ಮತ್ತು ಅಂಕಿತಾ ಅಮರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರಕ್ಕೆ ಗಗನ್ ಬಡೇರಿಯಾ ಸಂಗೀತ ಮತ್ತು ಶ್ರೀವತ್ಸನ್ ಸೆಲ್ವರಾಜನ್ ಅವರ ಛಾಯಾಗ್ರಹಣವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT