ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿಗೆ ಕೋವಿಡ್ ಟೆಸ್ಟ್ ಪಾಸಿಟಿವ್ ಬಂದಿದೆ. ‘ಆಚಾರ್ಯ’ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸುವ ಸಲುವಾಗಿ ಕೋವಿಡ್ ಟೆಸ್ಟ್ ಮಾಡಿಸಿದ್ದರು ಚಿರಂಜೀವಿ. ಆ ವೇಳೆ ಪಾಸಿಟಿವ್ ಇರುವುದು ಗೊತ್ತಾಗಿದೆ.
ತಕ್ಷಣವೇ ಹೋಮ್ ಕ್ವಾರಂಟೈನ್‌ಗೆ ವ್ಯವಸ್ಥೆ ಮಾಡಿಕೊಂಡಿದ್ದಾರೆ ಮೆಗಾಸ್ಟಾರ್. ಅಲ್ಲದೇ ಇತ್ತೀಚೆಗೆ ತಮ್ಮನ್ನು ಭೇಟಿ ಮಾಡಿದವರು ಟೆಸ್ಟ್ ಮಾಡಿಸಿಕೊಳ್ಳಲು ಸೂಚಿಸಿದ್ದಾರೆ.
ಬಹಳ ದಿನಗಳ ನಂತರ ಕೊರಟಾಲ ಶಿವ ನಿರ್ದೇಶನದ ಆಚಾರ್ಯ ಸಿನಿಮಾದ ಶೂಟಿಂಗ್ ಆರಂಭವಾಗಬೇಕಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಶೂಟಿಂಗ್ ತಡವಾಗಿತ್ತು. ಈಗ ಮತ್ತೆ ಚಿರಂಜೀವಿಗೆ ನೆಗೆಟಿವ್ ಬರುವವರೆಗೂ ಕಾಯಬೇಕಿದೆ ಚಿತ್ರತಂಡ.
ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಚಿರಂಜೀವಿ ‘ನಾನು ಆಚಾರ್ಯ ಸಿನಿಮಾ ಶೂಟಿಂಗ್ ತೆರಳುವ ಸಲುವಾಗಿ ಕೋವಿಡ್ ಟೆಸ್ಟ್ ಮಾಡಿಸಿದ್ದೆ. ದುರಾದೃಷ್ಟವಶಾತ್ ನನಗೆ ಪಾಸಿಟಿವ್ ಬಂದಿದೆ. ಆದರೆ ನನಗೆ ಯಾವುದೇ ಕೋವಿಡ್ ಲಕ್ಷಣಗಳಿಲ್ಲ. ಸದ್ಯ ನಾನು ಹೋಮ್ ಕ್ವಾರಂಟೈನ್‌ನಲ್ಲಿದ್ದೇನೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.