ADVERTISEMENT

Cinema | ‘ಮೆಲೋಡಿ ಡ್ರಾಮ’ದ ಸುಮಧುರ ಹಾಡು

​ಪ್ರಜಾವಾಣಿ ವಾರ್ತೆ
Published 2 ಜೂನ್ 2023, 0:35 IST
Last Updated 2 ಜೂನ್ 2023, 0:35 IST
ಸುಪ್ರೀತಾ 
ಸುಪ್ರೀತಾ    

ಪ್ರೈಮ್ ಸ್ಟಾರ್ ಸ್ಟುಡಿಯೋ ಲಾಂಛನದಲ್ಲಿ ಎಂ.ನಂಜುಂಡ ರೆಡ್ಡಿ ಅವರು ನಿರ್ಮಿಸಿರುವ, ಮಂಜು ಕಾರ್ತಿಕ್ ನಿರ್ದೇಶನದ ‘ಮೆಲೋಡಿ ಡ್ರಾಮ’ ಚಿತ್ರದ ಹಾಡುಗಳ ಬಿಡುಗಡೆ ಇತ್ತೀಚೆಗೆ ಚಿತ್ರತಂಡದ ಸದಸ್ಯರ ಸಮ್ಮುಖದಲ್ಲಿ ನಡೆಯಿತು.

‘ಚಿತ್ರಕ್ಕೆ ‘ನಿನ್ನ ಕಥೆ ನನ್ನ ಜೊತೆ’ ಎಂಬ ಅಡಿಬರಹವಿದೆ‌. ಚಿತ್ರದಲ್ಲಿ ಏಳು ಸುಮಧುರ ಹಾಡುಗಳಿವೆ. ಸೋನು ನಿಗಮ್, ಕೈಲಾಶ್ ಖೇರ್, ಪಲಾಕ್ ಮುಚ್ವಲ್ ಮುಂತಾದ ಖ್ಯಾತ ಗಾಯಕರು ಹಾಡಿದ್ದಾರೆ. ‘ದ್ವಿಪಾತ್ರ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದ ಸತ್ಯ ಈ ಚಿತ್ರದ ನಾಯಕನಾಗಿ, ‘ಸೀತಾವಲ್ಲಭ’ ಹಾಗೂ ‘ಸರಸು’ ಧಾರಾವಾಹಿ ಮೂಲಕ ಮನೆಮಾತಾಗಿರುವ ಸುಪ್ರೀತ ಸತ್ಯನಾರಾಯಣ ಅವರು ನಾಯಕಿಯಾಗಿ ಇಲ್ಲಿ ನಟಿಸಿದ್ದಾರೆ. ರಂಗಾಯಣ ರಘು, ಅನು ಪ್ರಭಾಕರ್, ರಾಜೇಶ್ ನಟರಂಗ, ಬಾಲು ರಾಜವಾಡಿ, ಲಕ್ಷ್ಮೀ ಸಿದ್ದಯ್ಯ ಮುಂತಾದವರು ಅಭಿನಯಿಸಿದ್ದಾರೆ. ಜೂನ್‌ನಲ್ಲೇ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ಮಾಡುತ್ತಿದ್ದೇವೆ. ಕಳೆದ ಹದಿನೈದು ವರ್ಷಗಳಿಂದ ನಿರ್ದೇಶನ ವಿಭಾಗದಲ್ಲಿ ಕಾರ್ಯನಿರ್ವಹಿಸಿರುವ ನನ್ನ ನಿರ್ದೇಶನದ ಮೊದಲ ಚಿತ್ರವಿದು’ ಎನ್ನುತ್ತಾರೆ ಮಂಜು ಕಾರ್ತಿಕ್. 

ಚಿತ್ರವನ್ನು ನಂಜುಂಡ ರೆಡ್ಡಿ ಅವರು ನಿರ್ಮಿಸಿದ್ದು, ಮನು ಡಿ.ಬಿ. ಹಳ್ಳಿ ಅವರ ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ. ಹಾಡುಗಳಿಗೆ ಜಯಂತ ಕಾಯ್ಕಿಣಿ, ವಿ.ನಾಗೇಂದ್ರ ಪ್ರಸಾದ್, ಧನಂಜಯ ರಂಜನ್ ಗೀತಸಾಹಿತ್ಯವಿದೆ. ಕಿರಣ್ ರವೀಂದ್ರನಾಥ್ ಚಿತ್ರದ ಸಂಗೀತ ನಿರ್ದೇಶಕರು. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.