ನಟ ರಕ್ಷಿತ್ ಶೆಟ್ಟಿ ತಮ್ಮ ಪರಂವಃ ಪಿಕ್ಚರ್ಸ್ ಮೂಲಕ ನಿರ್ಮಿಸಿದ್ದ ಚಿತ್ರ ‘ಮಿಥ್ಯ’. ಹೆತ್ತವರನ್ನು ಕಳೆದುಕೊಂಡ ಮಿಥುನ್ ಎಂಬ ಹುಡುಗನ ಹೊಸ ಕನಸ್ಸಿನ ಕಥಾಹಂದರ ಹೊಂದಿರುವ ಈ ಚಿತ್ರ ಹಲವು ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರಶಂಸೆ ಗಳಿಸಿತ್ತು. ಬಳಿಕ ಚಿತ್ರಮಂದಿರಕ್ಕೆ ಲಗ್ಗೆ ಇಟ್ಟರೂ ಪ್ರೇಕ್ಷಕರು ಚಿತ್ರದ ಕುರಿತು ಹೆಚ್ಚು ಒಲವು ತೋರಿಸಲಿಲ್ಲ. ಇದೀಗ ಚಿತ್ರ ಅಮೆಜಾನ್ ಪ್ರೈಮ್ ಒಟಿಟಿ ವೇದಿಕೆಯಲ್ಲಿ ಲಭ್ಯವಿದೆ.
‘ಏಕಂ’ ಎಂಬ ವೆಬ್ ಸಿರೀಸ್ ಸೇರಿದಂತೆ ಅನೇಕ ಕಿರುಚಿತ್ರಗಳನ್ನು ನಿರ್ದೇಶಿಸಿರುವ ಸುಮಂತ್ ಭಟ್ ಈ ಚಿತ್ರದ ನಿರ್ದೇಶಕರು. ಚಿತ್ರದಲ್ಲಿ ಮೂರು ಮುಖ್ಯಪಾತ್ರಗಳಿದೆ. ಮಾಸ್ಟರ್ ಅತೀಶ್ ಎಸ್ ಶೆಟ್ಟಿ ಮಿಥುನ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ರಕಾಶ್ ತುಮ್ಮಿನಾಡು, ರೂಪ ವರ್ಕಾಡ್ ಸಹ ಮುಖ್ಯಭೂಮಿಕೆಯಲ್ಲಿದ್ದಾರೆ.
ಉದಿತ್ ಕುರಾನ ಛಾಯಾಚಿತ್ರಗ್ರಹಣ, ಭುವನೇಶ್ ಮಣಿವಣನ್ ಸಂಕಲನ ಹಾಗೂ ಮಿಥುನ್ ಮುಕುಂದನ್ ಸಂಗೀತ ಚಿತ್ರಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.