
ಕೊಚ್ಚಿ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಲಯಾಳ ಚಿತ್ರರಂಗದ ಹಿರಿಯ ನಟ ಮೋಹನ್‌ಲಾಲ್ ಅವರ ತಾಯಿ ಶಾಂತಕುಮಾರಿ ಅಮ್ಮ ಅವರು ತಮ್ಮ ಮನೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಶಾಂತಕುಮಾರಿ ಅವರಿಗೆ 90 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ತಾಯಿ ಮೃತಪಟ್ಟ ವೇಳೆ ನಟ ಮೋಹನ್‌ಲಾಲ್ ಅವರು ಮನೆಯಲ್ಲಿರಲಿಲ್ಲ. ವಿಷಯ ತಿಳಿದ ನಂತರ ಮನೆಗೆ ಆಗಮಿಸಿದ್ದಾರೆ.
ಮಮ್ಮುಟ್ಟಿ ಸೇರಿದಂತೆ ಮಾಲಿವುಡ್‌ನ ಹಲವು ಕಲಾವಿದರು, ನಟ ಮೋಹನ್‌ಲಾಲ್ ಅವರ ಮನೆಗೆ ಭೇಟಿ ನೀಡಿ ಅವರ ತಾಯಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ವಿಧಾನಸಭಾ ಸ್ಪೀಕರ್ ಎ.ಎನ್. ಶಂಸೀರ್ ಸೇರಿದಂತೆ ಹಲವು ಪ್ರಮುಖರು ಶಾಂತಕುಮಾರಿ ಅವರ ನಿಧನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.
ಮೋಹನ್‌ಲಾಲ್ ಅವರ ತಂದೆ ವಿಶ್ವನಾಥನ್ ನಾಯರ್ ಅವರು ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.