ಮೊನಾಲಿಸಾ
ನವದೆಹಲಿ: ಮಹಾಕುಂಭ ಮೇಳದಲ್ಲಿ ಸುಂದರ ಕಣ್ಣಿನಿಂದ ಎಲ್ಲರ ಗಮನ ಸೆಳೆದು ಬಾಲಿವುಡ್‌ಗೆ ಕಾಲಿಟ್ಟಿದ್ದ 16 ವರ್ಷದ ಮೊನಾಲಿಸಾ ಬೋಸ್ಲೆ ಈಗ ಮಲಯಾಳಂ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.
‘ನಾಗಮ್ಮ’ ಎನ್ನುವ ಮಲಯಾಳಂ ಸಿನಿಮಾದಲ್ಲಿ ಮೊನಾಲಿಸಾ ಕಾಣಿಸಿಕೊಳ್ಳುತ್ತಿದ್ದಾರೆ.
ಮೊನಾಲಿಸಾ, ನಟ ಕೈಲಾಶ್ ಅವರೊಂದಿಗೆ ನಟಿಸಲಿದ್ದು, ಚಿತ್ರದ ಮುಹೂರ್ತದ ಪೂಜೆಯಲ್ಲಿ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ನಿರ್ಮಾಪಕ ಸಿಬಿ ಮಲಯಿಲ್ ಕೂಡ ಭಾಗವಹಿಸಿದ್ದರು.
‘ನಾಗಮ್ಮ’ ಚಿತ್ರವನ್ನು ಪಿ.ಬಿನು ವರ್ಗೀಸ್ ನಿರ್ದೇಶನ ಮಾಡುತ್ತಿದ್ದು, ಜೀಲಿ ಜಾರ್ಜ್ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಮೊನಾಲಿಸಾ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ‘ಒನ್‌ಮನೋರಮ’ ವರದಿ ತಿಳಿಸಿದೆ.
‘ನಾಗಮ್ಮ’ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ ಅಂತ್ಯದ ವೇಳೆಗೆ ಪ್ರಾರಂಭವಾಗುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.
ಪ್ರಯಾಗ್‌ರಾಜ್‌ನಲ್ಲಿ ಈ ಬಾರಿ ನಡೆದ ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಮೊನಾಲಿಸಾ ತಮ್ಮ ಕಣ್ಣಿನಿಂದ ಇಂಟರ್‌ನೆಟ್‌ನಲ್ಲಿ ಸಂಚಲನ ಮೂಡಿಸಿದ್ದರು. ಬಾಲಿವುಡ್‌ನಲ್ಲಿ ಸಿನಿಮಾ ಮಾಡುತ್ತಿರುವ ಬಗ್ಗೆಯೂ ಮಾಹಿತಿ ಹಂಚಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.