Mufti Police
ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಮತ್ತು ಐಶ್ವರ್ಯ ರಾಜೇಶ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಪ್ಯಾನ್ ಇಂಡಿಯಾ ಸಿನಿಮಾ ‘ಮಫ್ತಿ ಪೊಲೀಸ್’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ.
ಜಿ.ಎಸ್. ಆರ್ಟ್ಸ್ ನಿರ್ಮಿಸಿರುವ ಈ ಚಿತ್ರವನ್ನು ನಿರ್ಮಾಪಕ ಜಿ.ಅರುಲ್ ಕುಮಾರ್ ಪ್ರಸ್ತುತಪಡಿಸಿದ್ದಾರೆ. ದಿನೇಶ್ ಲೆಟ್ಚುಮನನ್ ನಿರ್ದೇಶನದ ಚೊಚ್ಚಲ ಚಿತ್ರ ಇದಾಗಿದೆ. ‘ಮಫ್ತಿ ಪೊಲೀಸ್’ ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿದೆ. ‘ನ್ಯಾಯವನ್ನು ನೀತಿಯಿಂದ ಮೀರಿಸಬಹುದು. ಆದರೆ ಅಂತಿಮ ಲೆಕ್ಕಾಚಾರದಲ್ಲಿ ನೀತಿ ಮಾತ್ರ ಗೆಲ್ಲುತ್ತದೆ ಎಂಬ ಎಳೆ ಇಟ್ಕೊಂಡು ಸಿನಿಮಾ ಮಾಡಲಾಗಿದೆ’ ಎಂದಿದೆ ಚಿತ್ರತಂಡ.
ಟೀಸರ್‌ನಲ್ಲಿ ಭರ್ಜರಿಯಾದ ಆ್ಯಕ್ಷನ್ ದೃಶ್ಯಗಳು ತುಂಬಿದೆ. ಅಭಿರಾಮಿ, ರಾಮ್‌ಕುಮಾರ್, ಜಿ.ಕೆ.ರೆಡ್ಡಿ, ಪಿ.ಎಲ್.ತೇನಪ್ಪನ್, ಲೋಗು, ವೇಲಾ ರಾಮಮೂರ್ತಿ, ತಂಗದುರೈ, ರಾಹುಲ್, ಒ.ಎ.ಕೆ. ಸುಂದರ್ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ಸರವಣನ್ ಅಭಿಮನ್ಯು ಛಾಯಾಚಿತ್ರಗ್ರಹಣ, ಆಶಿವಗನ್ ಸಂಗೀತ, ಲಾರೆನ್ಸ್ ಕಿಶೋರ್ ಸಂಕಲನ ಚಿತ್ರಕ್ಕಿದೆ. ಸಿನಿಮಾ ಬಿಡುಗಡೆ ದಿನಾಂಕವನ್ನು ಶೀಘ್ರದಲ್ಲೇ ಚಿತ್ರತಂಡ ಘೋಷಿಸಲಿದ್ದು, ತಮಿಳು, ತೆಲುಗು, ಮಲಯಾಳ ಮತ್ತು ಕನ್ನಡದಲ್ಲಿ ಏಕಕಾಲದಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.