
ಹಿರಿಯ ನಟ ರಾಜೇಶ್ ಅವರ ಮೊಮ್ಮಗ ಸಾಯಿನಂದ್ ಚಿತ್ರರಂಗ ಪ್ರವೇಶಿಸಿದ್ದಾರೆ. ಅವರು ನಾಯಕನಾಗಿ ನಟಿಸುತ್ತಿರುವ ‘ಮುಜುಗರ’ ಚಿತ್ರ ಇತ್ತೀಚೆಗಷ್ಟೇ ಸೆಟ್ಟೇರಿತು. ತರುಣ್ ಎನ್ ಆ್ಯಕ್ಷನ್– ಕಟ್ ಹೇಳುತ್ತಿದ್ದಾರೆ.
‘ನನಗೂ ಚಿತ್ರರಂಗಕ್ಕೂ 20 ವರ್ಷಗಳ ನಂಟು. ಟಿ.ಎಸ್. ನಾಗಾಭರಣ, ಅನಂತರಾಜು, ಅಮರ್ ಮುಂತಾದವರ ಬಳಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ್ದೇನೆ. ಸ್ವತಂತ್ರ ನಿರ್ದೇಶಕನಾಗಿ ಇದು ಮೊದಲ ಚಿತ್ರ. ಕಾಫಿತೋಟದ ಸುತ್ತ ನಡೆಯುವ ಪ್ರೇಮಕಥೆಯಿದು. ನಿಮಿಷ್ಕ ಹಾಗೂ ತನು ನಾಯಕಿಯರಾಗಿ ಅಭಿನಯಿಸುತ್ತಿದ್ದಾರೆ. ಎರಡನೇ ನಾಯಕನಾಗಿ ಸುಭಾಷ್ ಹಾಗೂ ಖಳನ ಪಾತ್ರದಲ್ಲಿ ಪ್ರಮೋದ್ ಶೆಟ್ಟಿ ಕಾಣಿಸಿಕೊಳ್ಳಲಿದ್ದಾರೆ. ಡಿಸೆಂಬರ್ 15ರಿಂದ ಸಕಲೇಶಪುರ, ಚಿಕ್ಕಮಗಳೂರು, ಹೊರನಾಡು, ಕಳಸ, ಮಡಿಕೇರಿ ಮುಂತಾದೆಡೆ ಚಿತ್ರೀಕರಣ ನಡೆಯಲಿದೆ’ ಎಂದು ಮಾಹಿತಿ ನೀಡಿದರು ನಿರ್ದೇಶಕ.
ಶಾಂತ ಶ್ರೀನಿವಾಸ್ ಡಿ. ಬಂಡವಾಳ ಹೂಡುತ್ತಿದ್ದಾರೆ. ಜೈ ಆನಂದ್ ಛಾಯಾಚಿತ್ರಗ್ರಹಣ, ಶ್ರೀಧರ್ ವಿ.ಸಂಭ್ರಮ್ ಸಂಗೀತ ನಿರ್ದೇಶನವಿದೆ. ‘ನಾನು ನಟನಾಗಲು ನನ್ನ ತಾತ ರಾಜೇಶ್ ಅವರೇ ಸ್ಫೂರ್ತಿ. ಇಂದು ಅವರಿದ್ದಿದ್ದರೆ ತುಂಬಾ ಖುಷಿ ಪಡುತ್ತಿದ್ದರು’ ಎಂದ ಅವರು, ನಾಗತಿಹಳ್ಳಿ ಚಂದ್ರಶೇಖರ ಅವರ ಟೆಂಟ್ ಶಾಲೆಯಲ್ಲಿ ಅಭಿನಯ ಕಲಿತಿದ್ದೇನೆ’ ಎಂದರು ನಾಯಕ ಸಾಯಿನಂದ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.