
2026ರ ಮಾರ್ಚ್‌ನಲ್ಲಿ ಬಿಡುಗಡೆಯಾಗುತ್ತಿರುವ ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ ಸಿನಿಮಾ ‘ಅತಿ ಹೆಚ್ಚು ಕಲಾವಿದರು ನಟಿಸಿರುವ ಸಿನಿಮಾವಾಗಲಿದೆ‘ ಎಂದು ಸಿನಿಮಾದ ನಿರ್ಮಾಪಕ ರಾಮ್ ಗೋಪಾಲ್ ವರ್ಮಾ ಅವರು ಹೇಳಿದ್ದಾರೆ.
‘ಧುರಂಧರ್’ ಸಿನಿಮಾದ ಮೊದಲ ಭಾಗ 2025ರ ಡಿಸೆಂಬರ್‌ನಲ್ಲಿ ಬಿಡುಗಡೆಯಾಗಿತ್ತು. ಬಾಲಿವುಡ್ ನಟ ರಣವೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾ ಭಾರತದಲ್ಲಿ ₹831 ಕೋಟಿಗೂ ಹೆಚ್ಚು ಗಳಿಸುವ ಮೂಲಕ, ಭಾರತೀಯ ಚಿತ್ರರಂಗದಲ್ಲಿ ಹೆಚ್ಚು ಗಳಿಕೆ ಮಾಡಿದ ಹಿಂದಿ ಸಿನಿಮಾ ಎಂದು ಹೆಸರು ಪಡೆದಿದೆ. ಅಲ್ಲದೆ ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ₹1300 ಕೋಟಿಗಿಂತಲೂ ಹೆಚ್ಚು ಗಳಿಕೆ ಮಾಡಿದ ಸಿನಿಮಾವಾಗಿದೆ.
ಸಿನಿಮಾದ ಮೊದಲ ಭಾಗದಲ್ಲಿ ಕಂದಹಾರ್ ವಿಮಾನ ಅಪಹರಣ, 2001ರ ಸಂಸತ್ತಿನ ದಾಳಿ ಮತ್ತು 26/11 ಮುಂಬೈ ದಾಳಿಗಳಂತಹ ಘಟನೆಗಳ ಹಿನ್ನೆಲೆಯಲ್ಲಿ ನಡೆದ ರಹಸ್ಯ ಗುಪ್ತಚರ ಕಾರ್ಯಾಚರಣೆಗಳ ಬಗ್ಗೆ ಹೇಳಲಾಗಿದೆ. ಇದರಲ್ಲಿ ಅಕ್ಷಯ್ ಖನ್ನಾ, ಸಂಜಯ್ ದತ್ ಮತ್ತು ಸಾರಾ ಅರ್ಜುನ್, ಆರ್. ಮಾಧವನ್, ಅರ್ಜುನ್ ರಾಂಪಾಲ್ ಹಾಗೂ ಇತರರು ನಟಿಸಿದ್ದಾರೆ.
ಸಿನಿಮಾದ ನಿರ್ಮಾಪಕ ರಾಮ್ ಗೋಪಾಲ್ ವರ್ಮಾ ಅವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ‘ಧುರಂಧರ್ 2’ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ‘ಧುರಂಧರ್ 2 ಸಿನಿಮಾ ಅತಿ ಹೆಚ್ಚು ಮಂದಿ ಸ್ಟಾರ್ ಕಲಾವಿದರು ನಟಿಸಿರುವ ಚಿತ್ರವಾಗಲಿದೆ. ಚಿತ್ರದ ಮೊದಲ ಭಾಗ ‘ಧುರಂಧರ್’ನ ಪ್ರತಿಯೊಂದು ಪಾತ್ರ ಪ್ರೇಕ್ಷಕರ ಮನಸ್ಸಿನಲ್ಲಿ ಅಚ್ಚಳಿಯದಂತೆ ಉಳಿದಿದೆ. ಸಿನಿಮಾದ ಮೊದಲ ಭಾಗದಲ್ಲಿ ಪಾತ್ರಗಳು ಚಿಕ್ಕದಾಗಿರಬಹುದು ಅಥವಾ ದೊಡ್ಡದಾಗಿರಬಹುದು. ಆದರೆ ಸಿನಿಮಾದ ಎರಡನೇ ಭಾಗದಲ್ಲಿ ಅವರೆಲ್ಲರೂ ದೈತ್ಯ ಸೂಪರ್ ಸ್ಟಾರ್‌ಗಳಾಗಿದ್ದಾರೆ’ ಎಂದು ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.