ADVERTISEMENT

ಆಸ್ಪತ್ರೆಯಿಂದ ಮನೆಗೆ ಮರಳಿದ ಬಾಲಿವುಡ್‌ ನಟಿ ಮಲೈಕಾ ಅರೋರಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಏಪ್ರಿಲ್ 2022, 14:02 IST
Last Updated 3 ಏಪ್ರಿಲ್ 2022, 14:02 IST
ಮಲೈಕಾ ಅರೋರಾ
ಮಲೈಕಾ ಅರೋರಾ   

ಮುಂಬೈ: ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ನಟಿ ಮಲೈಕಾ ಅರೋರಾ ಅವರು ಭಾನುವಾರ ತಮ್ಮ ಮನೆಗೆ ಮರಳಿದ್ದಾರೆಎಂದು ‘ಎನ್‌ಡಿಟಿವಿ’ ವರದಿ ಮಾಡಿದೆ.

ನಟ ಹಾಗೂ ಬಾಯ್‌ಫ್ರೆಂಡ್‌ ಅರ್ಜುನ್ ಕಪೂರ್ ಅವರು ಮಲೈಕಾರನ್ನು ಆಸ್ಪತ್ರೆಯಿಂದ ಮನೆಗೆ ಕರೆತಂದಿದ್ದಾರೆ ಎಂದು ತಿಳಿದುಬಂದಿದೆ.

ಮುಂಬೈ– ಪುಣೆ ಹೆದ್ದಾರಿಯಲ್ಲಿ, ಮಲೈಕಾ ಅರೋರಾ ಅವರ ಕಾರು ಅಪಘಾತಕ್ಕೆ ಈಡಾಗಿತ್ತು. ಈ ಸಂದರ್ಭದಲ್ಲಿ ಮಲೈಕಾ ತಲೆಗೆ ಗಾಯವಾಗಿತ್ತು. ಅವರನ್ನು ಮುಂಬೈನ ಅಪೋಲೊ ಆಸ್ಪತ್ರೆಗೆ ಶನಿವಾರ ದಾಖಲಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.