ADVERTISEMENT

ಡ್ರಗ್ಸ್‌ ಪ್ರಕರಣ: ಆರ್ಯನ್‌ ಖಾನ್‌ ಜಾಮೀನು ಅರ್ಜಿ ಆದೇಶ ಅ.20ಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2021, 12:38 IST
Last Updated 14 ಅಕ್ಟೋಬರ್ 2021, 12:38 IST
ಆರ್ಯನ್‌ ಖಾನ್‌ ಅವರನ್ನು ಕರೆದೊಯ್ಯುತ್ತಿರುವ ಅಧಿಕಾರಿಗಳು
ಆರ್ಯನ್‌ ಖಾನ್‌ ಅವರನ್ನು ಕರೆದೊಯ್ಯುತ್ತಿರುವ ಅಧಿಕಾರಿಗಳು   

ಮುಂಬೈನ ವಿಶೇಷ ನ್ಯಾಯಾಲಯವು ಆರ್ಯನ್ ಖಾನ್ ಅವರ ಜಾಮೀನು ಅರ್ಜಿಯ ಆದೇಶವನ್ನು ಅಕ್ಟೋಬರ್ 20ಕ್ಕೆ ಮುಂದೂಡಿದೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಮುಂಬೈನಿಂದ ಗೋವಾ ಕಡೆಗೆ ತೆರಳುತ್ತಿದ್ದ ಹಡಗಿನ ಮೇಲೆ ಅಕ್ಟೋಬರ್ 3 ರಂದು ಎನ್‌ಸಿಬಿ ದಾಳಿ ನಡೆಸಿತ್ತು. ಆ ಸಂದರ್ಭದಲ್ಲಿ ಆರ್ಯನ್ ಖಾನ್ ಅವರನ್ನು ಬಂಧಿಸಲಾಯಿತು.

ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದು, ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದಾರೆ.

ADVERTISEMENT

ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಕಳೆದ ವಾರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಅವರು ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.