ADVERTISEMENT

ತೆಲುಗು ನಟಿ ಮೇಲೆ ಜಿಮ್ ಟ್ರೈನರ್‌ನಿಂದ ಅತ್ಯಾಚಾರ: ದೂರು ದಾಖಲು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಸೆಪ್ಟೆಂಬರ್ 2022, 9:17 IST
Last Updated 14 ಸೆಪ್ಟೆಂಬರ್ 2022, 9:17 IST
ಅತ್ಯಾಚಾರ
ಅತ್ಯಾಚಾರ   

ಮುಂಬೈ: ಮುಂಬೈನ ಜಿಮ್ ಟ್ರೈನರ್ ಒಬ್ಬ 24 ವರ್ಷ ವಯಸ್ಸಿನ ತೆಲುಗು ನಟಿ ಒಬ್ಬರ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ಈ ಕುರಿತು ಸಂತ್ರಸ್ತ ಯುವತಿ ಬಾಂದ್ರಾದ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು,ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

ಆದಿತ್ಯಾ ಅಜಯ್ ಕಪೂರ್ ಎನ್ನುವ ಯುವಕ ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ. ಈ ಕುರಿತು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ADVERTISEMENT

ಸಂತ್ರಸ್ತ ಯುವತಿಯು ತೆಲುಗು ಚಿತ್ರಗಳಲ್ಲಿ ನಟಿಸಿದ್ದು, ಕಿರುತೆರೆ ಕಲಾವಿದೆ ಕೂಡ ಆಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.