
ಪ್ರಜಾವಾಣಿ ವಾರ್ತೆ
‘ಬ್ರಹ್ಮಗಂಟು’ ಧಾರಾವಾಹಿ ಖ್ಯಾತಿಯ ಗೀತಾಭಾರತಿ ಭಟ್ ಮುಖ್ಯಭೂಮಿಕೆಯಲ್ಲಿರುವ ‘ರವಿಕೆ ಪ್ರಸಂಗ’ ಚಿತ್ರದ ಹಾಡೊಂದನ್ನು ಸಂಗೀತ ನಿರ್ದೇಶಕ ಗುರುಕಿರಣ್ ಇತ್ತೀಚೆಗೆ ಬಿಡುಗಡೆಗೊಳಿಸಿದರು.
‘ಮನಸಲಿ ಜೋರು ಕಲರವ’ ಎಂಬ ಸುಮಧುರ ಗೀತೆಗೆ ಕಿರಣ್ ಕಾವೇರಪ್ಪ ಅವರ ಸಾಹಿತ್ಯ, ಮಾನಸ ಹೊಳ್ಳ ಅವರ ಧ್ವನಿ ಹಾಗೂ ವಿನಯ್ ಶರ್ಮಾ ಸಂಗೀತವಿದೆ.
ಸಂತೋಷ್ ಕೊಡಂಕೇರಿ ಅವರ ಚಿತ್ರಕಥೆ-ನಿರ್ದೇಶನದ ಚಿತ್ರವನ್ನು ದೃಷ್ಟಿ ಮಿಡಿಯಾ & ಪ್ರೊಡಕ್ಷನ್ ನಿರ್ಮಾಣ ಮಾಡಿದೆ. ‘ಚಿತ್ರದ ಎಲ್ಲಾ ಕೆಲಸಗಳು ಮುಕ್ತಾಯವಾಗಿದ್ದು, ಶೀಘ್ರದಲ್ಲಿ ಚಿತ್ರ ತೆರೆಗೆ ಬರಲಿದೆ’ ಎಂದು ನಿರ್ದೇಶಕರು ಹೇಳಿದ್ದಾರೆ.
ಸುಮನ್ ರಂಗನಾಥ್, ರಾಕೇಶ್ ಮಯ್ಯ, ಸಂಪತ್ ಮೈತ್ರೇಯ, ಕೃಷ್ಣಮೂರ್ತಿ ಕವತಾರ್, ಪದ್ಮಜಾ ರಾವ್, ರಘು ಪಾಂಡೇಶ್ವರ್, ಪ್ರವೀಣ್ ಅಥರ್ವ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.