ADVERTISEMENT

ನನ್ನ ಪೋಸ್ಟ್ ಯಾರನ್ನೂ ಉದ್ದೇಶಿಸಿಲ್ಲ: ವಿವಾದಕ್ಕೆ ತೆರೆ ಎಳೆದ ನಟಿ ಸುಮಲತಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಮಾರ್ಚ್ 2025, 10:50 IST
Last Updated 12 ಮಾರ್ಚ್ 2025, 10:50 IST
<div class="paragraphs"><p>ನಟ ದರ್ಶನ್, ಸುಮಲತಾ</p></div>

ನಟ ದರ್ಶನ್, ಸುಮಲತಾ

   

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್‌, ನಟಿ ಸುಮಲತಾ ಅಂಬರೀಶ್‌ ಅವರನ್ನು ಅನ್‌ಫಾಲೋ ಮಾಡಿರುವುದು ಚರ್ಚೆಯಾಗುತ್ತಿರುವುದರ ನಡುವೆಯೇ ಸುಮಲತಾ ಅವರು ಇನ್ಸ್‌ಸ್ಟಾಗ್ರಾಂ ಸ್ಟೋರಿಯನ್ನು ದರ್ಶನ್‌ ಅವರನ್ನು ಉದ್ದೇಶಿಸಿಯೇ ಹಾಕಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ ಈ ಬಗ್ಗೆ ಸ್ವತಃ ಸುಮಲತಾ ಅವರೇ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಪೋಸ್ಟ್‌ ಹಂಚಿಕೊಂಡಿರುವ ಅವರು, ‘ನನ್ನ ಹಿಂದಿನ ಒಂದು ಪೋಸ್ಟ್ ಕುರಿತು ಅನಗತ್ಯವಾದ ವಿವಾದ ಸೃಷ್ಟಿಯಾಗಿರುವುದರಿಂದ ಈ ಸ್ಪಷ್ಟನೆ ನೀಡಲು ನಾನು ಇಚ್ಚಿಸುತ್ತೇನೆ. ನನ್ನ ಪೋಸ್ಟ್ ಯಾರನ್ನಾದರೂ ಗುರಿಯಾಗಿಸಿ ಮಾಡಲಾದದ್ದಲ್ಲ; ಅದು ಸರಳವಾಗಿ ಹಂಚಿಕೊಂಡ ವಿಷಯ ಮಾತ್ರ’ ಎಂದಿದ್ದಾರೆ.

ADVERTISEMENT

‘ಯಾರು ನನ್ನನ್ನು ಫಾಲೋ ಮಾಡುತ್ತಾರೆ ಅಥವಾ ಅನ್‌ಫಾಲೋ ಮಾಡುತ್ತಾರೆ ಎಂಬುದನ್ನು ಗಮನಿಸುವ ಅಭ್ಯಾಸ ಹೊಂದಿಲ್ಲ. ಮಾಧ್ಯಮಗಳಲ್ಲಿ ಈ ವಿಷಯದ ಬಗ್ಗೆ ಸುದ್ದಿಗಳು ಬಂದ ಬಳಿಕವೇ ನನಗೂ ಈ ಬೆಳವಣಿಗೆ ತಿಳಿಯಿತು. ನಿಜಕ್ಕೂ, ದರ್ಶನ್ ಅವರು ಇನ್‌ಸ್ಟಾಗ್ರಾಂ ಮತ್ತು ಟ್ವಿಟರ್‌ನಲ್ಲಿ ಯಾರನ್ನೂ ಫಾಲೋ ಮಾಡುತ್ತಿಲ್ಲ. ಇದು ಅವರ ವೈಯಕ್ತಿಕ ಆಯ್ಕೆ, ಮತ್ತು ಅದನ್ನು ಎಲ್ಲರೂ ಗೌರವಿಸಬೇಕು. ಇದನ್ನು ಬೇರೆ ರೀತಿಯಲ್ಲಿ ಅರ್ಥೈಸುವ ಅಗತ್ಯವಿಲ್ಲ. ತಾಯಿ-ಮಗನ ಸಂಬಂಧದಲ್ಲಿ ಅನಗತ್ಯವಾದ ವಿವಾದಗಳನ್ನು ಸೃಷ್ಟಿಸಬೇಡಿ ಎಂದು ಎಲ್ಲರಲ್ಲಿ ಮನವಿ ಮಾಡುತ್ತೇನೆ. ನನ್ನ ಪೋಸ್ಟ್ ಯಾರನ್ನೂ ಉದ್ದೇಶಿಸಿಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ. ನಾನು ನನ್ನ ಕುಟುಂಬ ಹಾಗೂ ಆಪ್ತರ ವಿಚಾರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಎಳೆದು ತರುವ ಅಭ್ಯಾಸವನ್ನು ಎಂದಿಗೂ ಹೊಂದಿಲ್ಲ’ ಎಂದು ಬರೆದುಕೊಂಡಿದ್ದಾರೆ. 

ಸದ್ಯ ದರ್ಶನ್‌ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಯಾರನ್ನೂ ಫಾಲೋ ಮಾಡುತ್ತಿಲ್ಲ. ಇನ್‌ಸ್ಟಾಗ್ರಾಂನಲ್ಲಿ ಅವರ ಫಾಲೋವರ್ಸ್‌ಗಳ ಸಂಖ್ಯೆ 23 ಲಕ್ಷ ಹಾಗೂ ಎಕ್ಸ್‌ನಲ್ಲಿ 12 ಲಕ್ಷ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.