ಲೀಲಾ ಮೋಹನ್ ನಟನೆಯ, ಕಲಿ ಗೌಡ ನಿರ್ದೇಶಿಸಿರುವ ‘ನಾಯಿ ಇದೆ ಎಚ್ಚರಿಕೆ’ ಸಿನಿಮಾದ ಟೀಸರ್ ಹಾಗೂ ಹಾಡುಗಳು ಇತ್ತೀಚೆಗೆ ಬಿಡುಗಡೆಗೊಂಡವು.
ನಿರ್ಮಾಪಕ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಟೀಸರ್ ಬಿಡುಗಡೆಗೊಳಿಸಿದರು. ನಟ ಪ್ರಥಮ್ ಅತಿಥಿಯಾಗಿ ಭಾಗವಹಿಸಿದ್ದರು. ಲೀಲಾ ಮೋಹನ್ ನಾಯಕರಾಗಿ ನಟಿಸುವುದರ ಜೊತೆಗೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈ ಮೊದಲು ‘ಗಡಿಯಾರ’ ಎಂಬ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿರುವ ಇವರು ‘ಕೌರ್ಯ’, ‘ಪುಟಾಣಿ ಪಂಟರುಗಳು’, ‘ರೋಡ್ ಕಿಂಗ್’ ಮತ್ತು ತೆಲುಗಿನ ‘ಕಲ್ಯಾಣಮಸ್ತು’ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ‘ಉಗ್ರಾವತಾರ’ ಚಿತ್ರದಲ್ಲೂ ಪಾತ್ರವೊಂದಕ್ಕೆ ಬಣ್ಣಹಚ್ಚಿದ್ದರು.
‘ನಾನು ವೃತ್ತಿಯಲ್ಲೂ ವೈದ್ಯ. ಈ ಚಿತ್ರದಲ್ಲೂ ವೈದ್ಯನ ಪಾತ್ರ ಮಾಡಿದ್ದೇನೆ. ಇದರಲ್ಲೂ ನನ್ನ ಹೆಸರು ಲೀಲಾ. ಇದು ನಾಯಿ ಹಾಗೂ ಮನುಷ್ಯನ ಬಾಂಧವ್ಯದ ಕುರಿತಾದ ಸಿನಿಮಾ. ಸಸ್ಪೆನ್ಸ್, ಥ್ರಿಲ್ಲರ್, ಹಾರಾರ್ ಅಂಶಗಳುಳ್ಳ ಭಾವನಾತ್ಮಕ ಸಿನಿಮಾವಿದು. ದಿವ್ಯಶ್ರೀ ಈ ಚಿತ್ರದ ನಾಯಕಿ. ಪ್ರಮೋದ್ ಶೆಟ್ಟಿ, ರಾಜ್ ಬಲ್ವಾಡಿ, ದಿನೇಶ್ ಮಂಗಳೂರು, ನಾಗೇಂದ್ರ ಅರಸ್, ಮಾನಸ, ಚಂದನ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸಿನಿಮಾ ಮುಂದಿನ ತಿಂಗಳು ತೆರೆಕಾಣಲಿದೆ’ ಎಂದರು ಲೀಲಾ ಮೋಹನ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.