
ಪ್ರಜಾವಾಣಿ ವಾರ್ತೆ
ನಿರ್ದೇಶಕ ನಾಗಶೇಖರ್ ನಟ ಕೂಡ ಹೌದು. ಅವರು ನಾಯಕನಾಗಿ ನಟಿಸುತ್ತಿರುವ ‘ವಾರ್ತೆಗಳು ಓದುತ್ತಿರುವವರು ಶಂಕರ್‌ನಾಗ್’ ಚಿತ್ರ ಇತ್ತೀಚೆಗಷ್ಟೇ ಸೆಟ್ಟೇರಿದೆ. ಈ ಚಿತ್ರಕ್ಕೆ ಜಿಯಾ ಉಲ್ಲಾ ಖಾನ್ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.
ಹಾಸ್ಯ ಕಲಾವಿದನಾಗಿ ಚಿತ್ರರಂಗಕ್ಕೆ ಬಂದ ನಾಗಶೇಖರ್ ಈ ಹಿಂದೆ ‘ಮೈನಾ’, ‘ಸಂಜು ವೆಡ್ಸ್ ಗೀತಾ’ ಮೊದಲಾದ ಸೂಪರ್‌ಹಿಟ್ ಚಿತ್ರಗಳನ್ನು ನೀರ್ದೇಶಿಸಿದ್ದರು.
ವಿ.ಎನ್. ಕಿರಣ್ (ವಾಸಣ್ಣ) ಅರ್ಪಿಸುತ್ತಿರುವ ಈ ಚಿತ್ರಕ್ಕೆ ರಾಮ್ ಚಿರು ಅವರು ಬಂಡವಾಳ ಹೂಡುತ್ತಿದ್ದಾರೆ. ಇದೇ ತಿಂಗಳಿನಿಂದಲೇ ಪೂರ್ಣಪ್ರಮಾಣದಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದು ಚಿತ್ರತಂಡ ಹೇಳಿದೆ.
ಚಿತ್ರದ ಸಹ ನಿರ್ಮಾಣ, ಸಂಗೀತ ನಿರ್ದೇಶನ ಕೂಡ ನಾಗಶೇಖರ್ ಅವರದ್ದೆ. ಚಿತ್ರದ ಉಳಿದ ತಾಂತ್ರಿಕವರ್ಗ ಹಾಗೂ ಕಲಾವಿದರ ಬಗ್ಗೆ ಸದ್ಯದಲ್ಲೇ ಮಾಹಿತಿ ನೀಡುವುದಾಗಿ ತಂಡ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.