ADVERTISEMENT

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ನರಸಿಂಹಲು ಎಂ. ಆಯ್ಕೆ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ಶನಿವಾರ ಮುಕ್ತಾಯಗೊಂಡಿದ್ದು, ಅಧ್ಯಕ್ಷರಾಗಿ ವೈಭವಿ ಚಿತ್ರಮಂದಿರದ ಮಾಲೀಕ ನರಸಿಂಹಲು ಎಂ ಆಯ್ಕೆಗೊಂಡಿದ್ದಾರೆ.

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2024, 18:18 IST
Last Updated 14 ಡಿಸೆಂಬರ್ 2024, 18:18 IST
<div class="paragraphs"><p>ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ನರಸಿಂಹಲು ಎಂ. ಆಯ್ಕೆ</p></div>

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ನರಸಿಂಹಲು ಎಂ. ಆಯ್ಕೆ

   

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ಶನಿವಾರ ಮುಕ್ತಾಯಗೊಂಡಿದ್ದು, ಅಧ್ಯಕ್ಷರಾಗಿ ವೈಭವಿ ಚಿತ್ರಮಂದಿರದ ಮಾಲೀಕ ನರಸಿಂಹಲು ಎಂ ಆಯ್ಕೆಗೊಂಡಿದ್ದಾರೆ. ಇವರು, ತಮ್ಮ ಪ್ರತಿಸ್ಪರ್ಧಿ ವಜ್ರೇಶ್ವರಿ ಚಿತ್ರಮಂದಿರದ ಮಾಲೀಕ ಸುಂದರ್‌ ರಾಜು ಆರ್‌ ಅವರನ್ನು ಮಣಿಸಿದರು.

ನಿರ್ಮಾಪಕ, ವಿತರಕ ಮತ್ತು ಪ್ರದರ್ಶಕ ವಲಯಗಳಿಂದ ವಿವಿಧ ಸ್ಥಾನಗಳಿಗಾಗಿ ಒಟ್ಟು 104 ಅಭ್ಯರ್ಥಿಗಳು ಕಣದಲ್ಲಿದ್ದರು. ಈ ಸಲ ಪ್ರದರ್ಶಕ ವಲಯಕ್ಕೆ ಅಧ್ಯಕ್ಷ ಸ್ಥಾನ ಮೀಸಲಾಗಿತ್ತು.

ADVERTISEMENT

ಉಪಾಧ್ಯಕ್ಷರಾಗಿ ನಿರ್ಮಾಪಕ ವಲಯದಿಂದ ಸಫೈರ್ ವೆಂಕಟೇಶ್, ಪ್ರದರ್ಶಕ ವಲಯದಿಂದ ರಂಗಪ್ಪ ಕೆ.ಓ, ವಿತರಕ ವಲಯದಿಂದ ಶಿಲ್ಪಾ ಶ್ರೀನಿವಾಸ್ ಆಯ್ಕೆಗೊಂಡರು. ಗೌರವ ಕಾರ್ಯದರ್ಶಿಯಾಗಿ ಪ್ರದರ್ಶಕ ವಲಯದಿಂದ ವೀರೇಶ್ ಚಿತ್ರಮಂದಿರದ ಮಾಲೀಕ ಕುಶಾಲ್ ಎಲ್.ಸಿ, ನಿರ್ಮಾಪಕ‌ ವಲಯದಿಂದ ಪ್ರವೀಣ್ ಕುಮಾರ್, ವಿತರಕ ವಲಯದಿಂದ ಎಂ.ಎನ್.ಕುಮಾರ್ ಆಯ್ಕೆಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.