ADVERTISEMENT

ಮುಂಬೈ: ಲತಾ ಮಂಗೇಶ್ಕರ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಫೆಬ್ರುವರಿ 2022, 9:27 IST
Last Updated 6 ಫೆಬ್ರುವರಿ 2022, 9:27 IST
ಲತಾ ಮಂಗೇಶ್ಕರ್‌- ಪ್ರಧಾನಿ ಮೋದಿ
ಲತಾ ಮಂಗೇಶ್ಕರ್‌- ಪ್ರಧಾನಿ ಮೋದಿ   

ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌(92) ಅವರ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲತಾ ಮಂಗೇಶ್ಕರ್‌ ಇಂದು ಬೆಳಿಗ್ಗೆ ನಿಧನರಾದರು.

ಸಂಜೆ 6:30ಕ್ಕೆ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತಿಮ ಸಂಸ್ಕಾರ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಹಾಜರಿರಲಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ADVERTISEMENT

ಇದೇ ವೇಳೆ ಲತಾ ಮಂಗೇಶ್ಕರ್‌ ಅವರಿಗೆ ಗೌರವ ಸಲ್ಲಿಸಿರುವ ಪ್ರಧಾನಿ ಮೋದಿ, ‘ಲತಾ ದೀದಿ ಸ್ವರ್ಗಲೋಕಕ್ಕೆ ಹೋಗಿದ್ದಾರೆ. ನನ್ನಂತೆಯೇ ಅನೇಕರು ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು ಎಂದು ಹೆಮ್ಮೆಯಿಂದ ಹೇಳುತ್ತಾರೆ. ನೀವು ಎಲ್ಲಿಗೆ ಹೋದರೂ ಲತಾ ದೀದಿ ಅವರ ಪ್ರೀತಿಪಾತ್ರರನ್ನು ಕಾಣಬಹುದು. ಅವರ ಸುಮಧುರ ಕಂಠ ಯಾವಾಗಲೂ ನಮ್ಮೊಂದಿಗೆ ಇರುತ್ತದೆ. ನಾನು ಅವರಿಗೆ ಭಾರವಾದ ಹೃದಯದಿಂದ ಗೌರವ ಸಲ್ಲಿಸುತ್ತೇನೆ’ ಎಂದು ತಿಳಿಸಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.