ADVERTISEMENT

‘ಕಂದೀಲು‘ ಸಿನಿಮಾಗೆ ರಾಷ್ಟ್ರೀಯ ಪುರಸ್ಕಾರ: ರಾಷ್ಟ್ರಪತಿಯಿಂದ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2025, 9:10 IST
Last Updated 24 ಸೆಪ್ಟೆಂಬರ್ 2025, 9:10 IST
   

ನವದೆಹಲಿ : ಕನ್ನಡದ ‘ಕಂದೀಲು‘ ಚಿತ್ರಕ್ಕೆ ಭಾಷಾ ವಿಭಾಗದಲ್ಲಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಲಭಿಸಿದೆ.

ದೆಹಲಿಯಲ್ಲಿ ನಡೆದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಿರ್ದೇಶಕಿ ಯಶೋದ ಪ್ರಕಾಶ್ ಕೊಟ್ಟುಕತ್ತೀರ ಹಾಗೂ ನಿರ್ಮಾಪಕ ಪ್ರಕಾಶ್ ಕರಿಯಪ್ಪ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

'12th ಫೇಲ್‌' ಸಿನಿಮಾದ ನಟನೆಗಾಗಿ ನಟ ವಿಕ್ರಾಂತ್ ಮಾಸ್ಸಿ, 'ಜವಾನ್‘ ಚಿತ್ರಕ್ಕಾಗಿ ಶಾರುಖ್ ಖಾನ್ ಅವರು ಅತ್ಯುತ್ತಮ ನಟ ಹಾಗೂ 'ಮಿಸಸ್ ಚಟರ್ಜಿ‘ ಸಿನಿಮಾಕ್ಕಾಗಿ ರಾಣಿ ಮುಖರ್ಜಿ ಅವರು ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿರುವ ಇವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ನೀಡಿ ಬುಧವಾರ ಗೌರವಿಸಿದರು.

ADVERTISEMENT

ಇದೇ ಸಮಾರಂಭದಲ್ಲಿ ದ್ರೌಪದಿ ಮುರ್ಮು ಅವರು ಮಲಯಾಳಂ ನಟ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.