ADVERTISEMENT

ನಾನು ರಹಸ್ಯ ಮದುವೆಯಾಗಿಲ್ಲ: ನಟಿ ನಯನತಾರಾ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2022, 9:53 IST
Last Updated 23 ಮಾರ್ಚ್ 2022, 9:53 IST
ನಯನತಾರ
ನಯನತಾರ   

ಚೆನ್ನೈ: ನಾವು ರಹಸ್ಯ ಮದುವೆಯಾಗಿಲ್ಲ, ಬಾಡಿಗೆ ತಾಯಿ ಮೂಲಕ ಮಗು ಪಡೆಯುತ್ತಿಲ್ಲ ಎಂದು ನಟಿ ನಯನತಾರಾ ಸ್ಪಷ್ಟಪಡಿಸಿದ್ದಾರೆ.

ಬಾಲಿವುಡ್ ಸುದ್ದಿಗಳನ್ನು ಪ್ರಸಾರ ಮಾಡುವ ಪಿಂಕ್‌ವಿಲ್ಲಾ ಜಾಲತಾಣಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು ಹೇಳಿದ್ದಾರೆ.

ಕಳೆದೊಂದು ವಾರದಿಂದ ಮಾಧ್ಯಮಗಳು ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ತಮಿಳು ನಿರ್ದೇಶಕ ವಿಘ್ನೇಶ್‌ ಶಿವನ್‌ ಹಾಗೂ ನಯನತಾರಾ ರಹಸ್ಯವಾಗಿ ಮದುವೆಯಾಗಿದ್ದು ಅವರು ಬಾಡಿಗೆ ತಾಯಿ ಮೂಲಕ ಮಗು ಪಡೆಯುತ್ತಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

ADVERTISEMENT

ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು ನಾನು ಸದ್ಯ ಸಿನಿಮಾಗಳಲ್ಲಿ ಬ್ಯುಜಿಯಾಗಿದ್ದೇನೆ, ಮದುವೆ ಬಗ್ಗೆ ಇನ್ನು ಯೋಚಿಸಿಲ್ಲ ಎಂದು ಹೇಳಿದ್ದಾರೆ. ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸುಳ್ಳು ಎಂದು ಹೇಳಿದ್ದಾರೆ.

ಸದ್ಯ ನಯನತಾರ ತಮಿಳು, ತೆಲುಗು ಸಿನಿಮಾಗಳಲ್ಲಿ ಸಕ್ರಿಯರಾಗಿದ್ದಾರೆ. ಅವರು ನಿರ್ದೇಶಕ ವಿಘ್ನೇಶ್‌ ಶಿವನ್‌ ಜೊತೆಯಲ್ಲಿ ವಾಸವಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.