
ಪ್ರಜಾವಾಣಿ ವಾರ್ತೆ
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಪೂಜೆಯಲ್ಲಿ ಪಾಲ್ಗೊಂಡ ನಟಿ ನಯನತಾರಾ ದಂಪತಿ
ಸುಬ್ರಹ್ಮಣ್ಯ: ಭಾರತೀಯ ಚಿತ್ರರಂಗದ ಬಹುಭಾಷಾ ನಟಿ ನಯನತಾರಾ ಹಾಗೂ ಪತಿ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ ದಂಪತಿ ಬುಧವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಸರ್ಪಸಂಸ್ಕಾರ ಪೂಜೆಯಲ್ಲಿ ಪಾಲ್ಗೊಂಡರು.
ನಯನತಾರಾ ತಮಿಳು, ತೆಲುಗು, ಮಲಯಾಳಂ ಹಾಗೂ ಕನ್ನಡ ಚಿತ್ರಗಳಲ್ಲಿ ನಟಿಸಿರುವ ಪ್ರಖ್ಯಾತ ಬಹುಭಾಷಾ ನಟಿಯಾಗಿದ್ದಾರೆ.
ಲೇಡಿ ಸೂಪರ್ ಸ್ಟಾರ್ ಎಂದೇ ಹೆಸರು ಪಡೆದಿರುವ ನಯನತಾರಾ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ಇಂಜಾಡಿ ಅವರು ನಯನತಾರ ದಂಪತಿಯನ್ನು ಸನ್ಮಾನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.