ಬೆಂಗಳೂರು: ದಕ್ಷಿಣ ಭಾರತದ ಕ್ಯೂಟ್ ಜೋಡಿ ಎಂದೇ ಖ್ಯಾತಿ ಗಳಿಸಿರುವ ನಿರ್ದೇಶಕ ವಿಘ್ನೇಶ್ ಶಿವನ್ ಮತ್ತು ನಟಿ ನಯನತಾರಾ ದಾಂಪತ್ಯದಲ್ಲಿ ಬಿರುಕು ಮೂಡಿದೆ. ವಿಚ್ಛೇದನ ಪಡೆಯಲಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು.
ಆದರೆ ಈ ಎಲ್ಲಾ ವದಂತಿಗಳಿಗೆ ನಯನತಾರಾ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ತೆರೆ ಎಳೆದಿದ್ದಾರೆ.
ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ನಯನತಾರಾ ಖಾತೆಯಂತೆ ಬಿಂಬಿಸುವ ಖಾತೆಯೊಂದರಲ್ಲಿ ಸ್ಟೋರಿಯೊಂದನ್ನು ಹಂಚಿಕೊಳ್ಳಲಾಗಿತ್ತು. 'ಮೂರ್ಖ ವ್ಯಕ್ತಿಯನ್ನು ಮದುವೆ ಮಾಡಿಕೊಳ್ಳುವುದು ಒಂದು ದೊಡ್ಡ ತಪ್ಪು' ಎಂದೂ ಬರೆದುಕೊಂಡಿರುವ ಸ್ಟೋರಿಯೊಂದು ಎಲ್ಲೆಡೆ ಹರಿದಾಡಿತ್ತು.
ಆದರೆ ಈ ಖಾತೆ ನಿಜವಾಗಿಯೂ ನಯನತಾರಾರದ್ದೇ ಎಂಬುವುದರ ಬಗ್ಗೆ ಯಾವುದೇ ಸ್ಪಷ್ಟತೆ ಈವರೆಗೂ ಸಿಕ್ಕಿಲ್ಲ.
'ನಮ್ಮ ಬಗ್ಗೆ ವಿಚಿತ್ರ ವದಂತಿಗಳನ್ನು ಕೇಳಿದಾಗ ನಮ್ಮ ಪ್ರತಿಕ್ರಿಯೆ ಹೀಗೆ ಎಂದು ನಯನತಾರಾ ವಿಘ್ನೇಶ್ ಶಿವನ್ ಜತೆಗಿನ ಫೋಟೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡು ವದಂತಿಗಳಿಗೆ ತೆರೆ ಎಳೆದಿದ್ದಾರೆ'.
2015ರಿಂದ ಪ್ರೀತಿಸುತ್ತಿದ್ದ ಈ ಜೋಡಿ, 2022ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸದ್ಯ ನಯನತಾರಾ ಯಶ್ ಅಭಿನಯದ ಟಾಕ್ಸಿಕ್, ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್, ಮೂಕುತಿ ಅಮ್ಮನ್ 2 ಸೇರಿದಂತೆ ಅನೇಕ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.