ADVERTISEMENT

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಸಿನಿಮಾರಂಗದ ಗಣ್ಯರಿಂದ ಶುಭಾಶಯ

​ಪ್ರಜಾವಾಣಿ ವಾರ್ತೆ
Published 28 ಜುಲೈ 2021, 9:09 IST
Last Updated 28 ಜುಲೈ 2021, 9:09 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಿ ಸಿನಿಮಾರಂಗದ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.

ಕಿಚ್ಚ ಸುದೀಪ್‌ ಟ್ವೀಟ್ ಮಾಡಿ, ’ನಿಮ್ಮ ಸರಳತೆಯನ್ನು ನೋಡಿ ಬೆಳೆದವನು ನಾನು. ನನ್ನ ವೃತ್ತಿಜೀವನದ ಆರಂಭದ ದಿನಗಳಲ್ಲಿ ವೈಯಕ್ತಿಕವಾಗಿ ನನಗೆ ಬೆಂಬಲ ಕೊಟ್ಟವರು ನೀವು, ನಿಮಗೆ ಒಳ್ಳೆಯದಾಗಲಿ’ ಎಂದು ಶುಭಾಶಯ ಹೇಳಿದ್ದಾರೆ.

ನಟಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಟ್ವೀಟ್‌ ಮೂಲಕ ಶುಭಾಶಯ ಕೋರಿ, ರಾಜ್ಯ ಹಾಗೂ ಮಂಡ್ಯದ ರೈತರ ಬದುಕನ್ನು ಉತ್ತಮ ಪಡಿಸುತ್ತೀರಿ ಎಂದು ನಂಬಿರುವೆ ಎಂದು ಹೇಳಿದ್ದಾರೆ.

ADVERTISEMENT

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಅವರಿಗೆ ಸೊರಬ ಕ್ಷೇತ್ರದ ಜನತೆಯ ಪರವಾಗಿ ಅಭಿನಂದನೆಗಳು ಎಂದು ನಟ ಹಾಗೂ ಶಾಸಕ ಕುಮಾರ್ ಬಂಗಾರಪ್ಪ ಟ್ವೀಟ್‌ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.