ADVERTISEMENT

‘chef ಚಿದಂಬರ’ ಚಿತ್ರದಲ್ಲಿ ನಿಧಿ ಸುಬ್ಬಯ್ಯ ಹೊಸ ಅವತಾರ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2023, 23:30 IST
Last Updated 21 ಡಿಸೆಂಬರ್ 2023, 23:30 IST
ನಿಧಿ ಸುಬ್ಬಯ್ಯ
ನಿಧಿ ಸುಬ್ಬಯ್ಯ   

ನಟ ಅನಿರುದ್ಧ್ ಜತ್ಕರ್‌ ನಾಯಕನಾಗಿ ನಟಿಸಿರುವ ‘chef ಚಿದಂಬರ’ ಚಿತ್ರದಲ್ಲಿ ನಾಯಕಿ ನಿಧಿ ಸುಬ್ಬಯ್ಯ ಅವರ ಪಾತ್ರ ಪರಿಚಯಿಸುವ ಪೋಸ್ಟರ್‌ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ‘ರಾಘು’ ಚಿತ್ರವನ್ನು ನಿರ್ದೇಶಿಸಿದ್ದ ಎಂ.ಆನಂದರಾಜ್ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ.

ಈ ಚಿತ್ರದಲ್ಲಿ ಮೋನಾ ಎಂಬುದು ನಿಧಿ ಸುಬ್ಬಯ್ಯ ಅವರ ಪಾತ್ರದ ಹೆಸರು. ಅವರ ಕೈಯಲ್ಲಿ ಬೇಡಿಯಿದ್ದು, ಪೊಲೀಸ್‌ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸುಳಿವನ್ನು ಪೋಸ್ಟರ್‌ ನೀಡುತ್ತಿದೆ.

‘ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಬಿರುಸಿನಿಂದ ಸಾಗಿವೆ. ಬಹಳ ದಿನಗಳ ನಂತರ ನಿಧಿ ಸುಬ್ಬಯ್ಯ ಅವರು ನಮ್ಮ ಚಿತ್ರದಲ್ಲಿ ನಟಿಸಿದ್ದಾರೆ. ನಿಧಿ ಅವರ ಪೋಸ್ಟರ್‌ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಕುತೂಹಲ ಮೂಡಿಸಿರುವ ನಿಧಿ ಅವರ ಪಾತ್ರ ಏನು ಎಂಬುದನ್ನು ಚಿತ್ರದಲ್ಲಿ ನೋಡಬೇಕು’ ಎಂದು ನಿರ್ದೇಶಕ ಆನಂದರಾಜ್ ಹೇಳಿದ್ದಾರೆ.

ADVERTISEMENT

‘ಡಾರ್ಕ್ ಕಾಮಿಡಿ’ ಇರುವ ಈ ಚಿತ್ರದಲ್ಲಿ ಅನಿರುದ್ಧ್ ಶೆಫ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್. ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಉದಯಲೀಲ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಸಂಕಲನವಿದೆ.

‘ಲವ್ ಮಾಕ್ಟೇಲ್’ ಖ್ಯಾತಿಯ ರೆಚೆಲ್ ಡೇವಿಡ್‌, ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್‌, ಶಿವಮಣಿ, ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.