ADVERTISEMENT

‘ಎಡಗೈ ಅಪಘಾತಕ್ಕೆ’ ಬಂದ ನಿಧಿ– ದಿಗಂತ್ ನಾಯಕನಾಗಿ ಅಭಿನಯಿಸುತ್ತಿರುವ ಸಿನಿಮಾ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2022, 10:36 IST
Last Updated 20 ಸೆಪ್ಟೆಂಬರ್ 2022, 10:36 IST
ದಿಗಂತ್‌, ನಿಧಿ ಸುಬ್ಬಯ್ಯ
ದಿಗಂತ್‌, ನಿಧಿ ಸುಬ್ಬಯ್ಯ   

ದೂದ್ ಪೇಡಾ ದಿಗಂತ್ ನಾಯಕನಾಗಿ ಅಭಿನಯಿಸುತ್ತಿರುವ ‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾ ಬಳಗಕ್ಕೆ ಪಂಚರಂಗಿ ಸುಂದರಿ ನಿಧಿ ಸುಬ್ಬಯ್ಯ ಪ್ರವೇಶಿಸಿದ್ದಾರೆ.

ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಹಿಟ್ ಸಿನಿಮಾ ‘ಪಂಚರಂಗಿ’ಯಲ್ಲಿ ದಿಗಂತ್ ಹಾಗೂ ನಿಧಿ ಸುಬ್ಬಯ್ಯ ಜೋಡಿ ಮೋಡಿ ಮಾಡಿತ್ತು. ಈ ಸಿನಿಮಾ ಇವರಿಬ್ಬರಿಗೂ ಬ್ರೇಕ್ ನೀಡಿತ್ತು. ಈ ಚಿತ್ರದ ಬಳಿಕ ನಿಧಿ ಮತ್ತು ದಿಗಂತ್‌ ಯಾವುದೇ ಚಿತ್ರದಲ್ಲಿಯೂ ಜೊತೆಯಾಗಿ ನಟಿಸಿರಲಿಲ್ಲ. ಇದೀಗ ಹತ್ತು ವರ್ಷದ ನಂತರ ದಿಗಂತ್ ನಾಯಕನಾಗಿ ನಟಿಸುತ್ತಿರುವ ಎಡಗೈ ಅಪಫಾತ ಚಿತ್ರದಲ್ಲಿ ನಿಧಿ ನಟಿಸುತ್ತಿದ್ದಾರೆ. ಈ ಪಾತ್ರದ ಬಗ್ಗೆ ಗುಟ್ಟುಬಿಟ್ಟು ಕೊಡದ ನಿರ್ದೇಶಕ ಸಮರ್ಥ್ ಕಡ್ಕೋಳ್ ನಿಧಿ ಪಾತ್ರ ಪ್ರೇಕ್ಷಕರಿಗೆ ಪಕ್ಕಾ ಮನರಂಜನೆ ನೀಡುತ್ತದೆ ಎಂದಿದ್ದಾರೆ.

ಸಮರ್ಥ್ ಕಡ್ಕೋಳ್‌ ನಿರ್ದೇಶನ ಮಾಡುತ್ತಿರುವ ಈ ಸಿನಿಮಾವನ್ನು ಗುರುದತ್‌ ಗಾಣಿಗ ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶಕ ಸಮರ್ಥ್ ಕೂಡ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ವಿಶೇಷವಾದ ಕಥಾವಸ್ತು ಹೊಂದಿದೆ. ಯಲಹಂಕ ಬಳಿಯ ಐಷಾರಾಮಿ ಅಪಾರ್ಟ್‌ಮೆಂಟ್‌ ಒಂದರಲ್ಲಿ ಈ ಸಿನಿಮಾದ ಚಿತ್ರೀಕರಣ ಶುಕ್ರವಾರದಿಂದ ಆರಂಭವಾಗಿದೆ. ದಿಗಂತ್‌ಗೆ ಜೋಡಿಯಾಗಿ ನಾಯಕಿ ಧನು ಹರ್ಷ ನಟಿಸುತ್ತಿದ್ದಾರೆ. ಅಭಿಮನ್ಯು ಸದಾನಂದ್ ಛಾಯಾಗ್ರಾಹಣ, ರಾಹುಲ್ ವಿ. ಪಾರ್ತವಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಚಿತ್ರಕ್ಕಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.