
‘ಹೊಂದಿಸಿ ಬರೆಯಿರಿ’ ಖ್ಯಾತಿಯ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ನಿರ್ದೇಶಿಸಿರುವ ‘ತೀರ್ಥರೂಪ ತಂದೆಯವರಿಗೆ’ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ.
ಈ ಸಿನಿಮಾದಲ್ಲಿ ತೆಲುಗಿನ ಕಿರುತೆರೆಯಲ್ಲಿ ಹೆಸರು ಮಾಡಿರುವ ಕನ್ನಡದ ನಿಹಾರ್ ಮುಕೇಶ್ ನಾಯಕನಾಗಿ ನಟಿಸಿದ್ದು, ‘ಅಕ್ಷರ’ ಎಂಬ ಪಾತ್ರದಲ್ಲಿ ನಟಿ ರಚನಾ ಇಂದರ್ ಜೋಡಿಯಾಗಿದ್ದಾರೆ.
‘ನೀ ನನ್ನವಳೇ...’ ಎಂಬ ಈ ಹಾಡಿಗೆ ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದಿದ್ದು, ರಜತ್ ಹೆಗ್ಡೆ, ಈಶಾ ಸುಚಿ ದನಿಯಾಗಿದ್ದಾರೆ. ಜೋ ಕೋಸ್ಟ್ ಸಂಗೀತ ನಿರ್ದೇಶನವಿರುವ ಹಾಡಿನಲ್ಲಿ ನಿಹಾರ್ ಹಾಗೂ ರಚನಾ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ರಾಜೇಶ್ ನಟರಂಗ, ಸಿತಾರಾ, ರವೀಂದ್ರ ವಿಜಯ್, ಅಜಿತ್ ಹಂಡೆ, ಅಶ್ವಿತಾ ಹೆಗಡೆ ಸೇರಿದಂತೆ ಅನುಭವಿ ತಾರಾಬಳಗದವಿದೆ. ಚಿತ್ರವು ‘ಜೈ ಚಾಮುಂಡೇಶ್ವರಿ ಪ್ರೊಡಕ್ಷನ್ಸ್’ ಮೂಲಕ ನಿರ್ಮಾಣವಾಗಿದೆ.
ಚಿತ್ರಕ್ಕೆ ರಾಮೇನಹಳ್ಳಿ ಜಗನ್ನಾಥ ಅವರೇ ಕಥೆ ಬರೆದಿದ್ದು, ‘ಹೊಂದಿಸಿ ಬರೆಯಿರಿ’ ಚಿತ್ರ ನಿರ್ಮಾಣ ಮಾಡಿದ್ದ ‘ಸಂಡೇ ಸಿನಿಮಾಸ್’ ಈ ಚಿತ್ರವನ್ನು ಪ್ರಸ್ತುತಪಡಿಸುತ್ತಿದೆ. ದೀಪಕ್ ಯರಗೇರಾ ಛಾಯಾಚಿತ್ರಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಪ್ರಶಾಂತ್ ರಾಜಪ್ಪ ಸಂಭಾಷಣೆ ಚಿತ್ರಕ್ಕಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸ ಪೂರ್ಣಗೊಳಿಸಿರುವ ಚಿತ್ರತಂಡ ಶೀಘ್ರದಲ್ಲೇ ಬಿಡುಗಡೆ ದಿನಾಂಕ ಘೋಷಣೆ ಮಾಡಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.