ADVERTISEMENT

ಹೆಸರಿಡದ ಹೊಸ ಚಿತ್ರದ ಶೂಟಿಂಗ್‌ನಲ್ಲಿ ನಿಖಿಲ್‌ ಬ್ಯುಸಿ

​ಪ್ರಜಾವಾಣಿ ವಾರ್ತೆ
Published 16 ಜನವರಿ 2022, 10:23 IST
Last Updated 16 ಜನವರಿ 2022, 10:23 IST
ನಿಖಿಲ್ ಕುಮಾರ್‌
ನಿಖಿಲ್ ಕುಮಾರ್‌   

ರೈಡರ್ ಸಿನಿಮಾದ ಯಶಸ್ಸಿನ ಖುಷಿಯಲ್ಲಿದ್ದಾರೆ ನಿಖಿಲ್‌ ಕುಮಾರ್‌. ಈಗ ಹೆಸರಿಡದ ಹೊಸ ಸಿನಿಮಾ ಸೆಟ್ಟೇರಿದ್ದು ಅದರಲ್ಲಿ ನಿಖಿಲ್‌ ನಾಯಕ. ಮಂಜು ಅಥರ್ವ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಪ್ರೇಮಂ ಪೂಜ್ಯಂಗೆ ಸಹ ನಿರ್ದೇಶಕರಾಗಿ ಕೆಲಸ ಮಾಡಿದ ಅನುಭವ ಅಥರ್ವ ಅವರದ್ದು.

ಹೊಸ ಚಿತ್ರದ ಮೊದಲ ಹಂತದ ಶೂಟಿಂಗ್ ಶುರುವಾಗಿದೆ. ನಿಖಿಲ್ ಅವರ ಭಾಗದ ಶೂಟಿಂಗ್ ನಡೆಯುತ್ತಿದೆ. ಪಕ್ಕಾ ಆ್ಯಕ್ಷನ್, ಕೌಟುಂಬಿಕಮನೋರಂಜನೆಯ ಚಿತ್ರವಿದು. ಕೆವಿಎನ್‌ ಪ್ರೊಡಕ್ಷನ್‌ ಬ್ಯಾನರ್‌ ಅಡಿಯಲ್ಲಿ ಈ ಚಿತ್ರ ನಿರ್ಮಾಣಗೊಳ್ಳುತ್ತಿದೆ. ನಿಶಾ ವೆಂಕಟ್ ಕೊನಂಕಿ ಮತ್ತು ಸುಪ್ರೀತ್ ನಿರ್ಮಾಣ ಮಾಡುತ್ತಿದ್ದಾರೆ.

ಅಜನೀಶ್ ಲೋಕನಾಥ್‌ ಸಂಗೀತ ನೀಡುತ್ತಿದ್ದಾರೆ. ಸಿನಿಮಾಟೋಗ್ರಾಫರ್‌ ನವೀನ್‌ ಕ್ಯಾಮೆರಾ ಕೈ ಚಳಕ ಸಿನಿಮಾದಲ್ಲಿರಲಿದೆ ಎಂದಿದೆ ಚಿತ್ರತಂಡ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.