
ಪಿಟಿಐ
‘ಯಾವುದೇ ನೈತಿಕತೆ ಅಥವಾ ಜವಾಬ್ದಾರಿಯ ಪ್ರಜ್ಞೆ ಇಲ್ಲ. ಕೇವಲ ವೈಯಕ್ತಿಕ ಲಾಭದ ಮಾರ್ಗ’ ಎಂದು ಬರೆದುಕೊಂಡಿರುವ ಅಮಿತಾಭ್ ಬಚ್ಚನ್ ಪೋಸ್ಟ್ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅವರು ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಕೆಲವು ಮಾಧ್ಯಮಗಳು ನಟ ಧರ್ಮೇಂದ್ರ ಅವರು ನಿಧನರಾಗಿದ್ದಾರೆ ಎಂದು ವರದಿ ಮಾಡಿದ್ದವು. ಈ ಸುಳ್ಳು ಆರೋಪದ ವಿರುದ್ದ ಕುಟುಂಬದವರು, ಸ್ನೇಹಿತರು ಹಾಗೂ ನಟನ ಅಭಿಮಾನಿಗಳು ಅಸಮಧಾನ ವ್ಯಕ್ತ ಪಡಿಸಿದ್ದರು.
ಇದೀಗ ಅಮಿತಾಭ್ ಬಚ್ಚನ್ ಅವರು ಧರ್ಮೇಂದ್ರನ ಕುರಿತು ಸುಳ್ಳು ವದಂತಿಯನ್ನು ವಿರೋಧಿಸಿ ಈ ಪೋಸ್ಟ್ ಹಂಚಿಕೊಂಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
'ಶೋಲೆ' ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಹಾಗೂ ನಟ ಧರ್ಮೇಂದ್ರ ಇಬ್ಬರು ಜೊತೆಯಾಗಿ ನಟಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.