ADVERTISEMENT

ಚಿತ್ರರಂಗದವರಿಂದ ಚಿಲ್ಲರೆ ಹೇಳಿಕೆ ಬೇಡ: ಡಿ.ಕೆ.ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2025, 23:30 IST
Last Updated 27 ಏಪ್ರಿಲ್ 2025, 23:30 IST
<div class="paragraphs"><p>ಡಿ.ಕೆ.ಶಿವಕುಮಾರ್‌</p></div>

ಡಿ.ಕೆ.ಶಿವಕುಮಾರ್‌

   

ಬೆಂಗಳೂರು: ಚಿತ್ರರಂಗದ ಕೆಲವರು ಚಿಲ್ಲರೆ ಹೇಳಿಕೆ ನೀಡುತ್ತಿದ್ದಾರೆ. ಅದನ್ನು ನಿಲ್ಲಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಡಾ.ರಾಜ್​ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಭಾನುವಾರ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ADVERTISEMENT

‘ಇತ್ತೀಚಿನ ದಿನಗಳಲ್ಲಿ ನಮ್ಮ ಕನ್ನಡ ಚಿತ್ರರಂಗಕ್ಕೆ ಒಂದು ಗೌರವ ಬಂದಿದೆ. ಅದನ್ನು ಕಾಪಾಡಿಕೊಂಡು ಹೋಗಬೇಕು. ಮಧ್ಯದಲ್ಲಿ ಕೆಲವರು ಚಿಲ್ಲರೆ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಚಿತ್ರರಂಗದಲ್ಲಿ ಇಲ್ಲದವರು, ನಿವೃತ್ತಿ ಹೊಂದಿದವರೆಲ್ಲ ಮಾತನಾಡಲು ಶುರು ಮಾಡಿದ್ದಾರೆ. ಮಾತನಾಡುವವರೆಲ್ಲ ಮೊದಲು ಚಿತ್ರರಂಗವನ್ನು ಉಳಿಸಿ. ಚಿತ್ರಮಂದಿರಗಳನ್ನು ಕಟ್ಟಿ. ಹೊಸ ಸಿನಿಮಾ ಮಾಡಿ, ನಿರ್ದೇಶನ ಮಾಡಿ’ ಎಂದರು.

‘ನಿರ್ಮಾಣ ಮಾಡಿದಾಗ ಸಿನಿಮಾ ಬೆಲೆ ಗೊತ್ತಾಗುತ್ತದೆ. ಅಂದಿನ ಚಿತ್ರರಂಗಕ್ಕೂ ಇಂದಿಗೂ ಬಹಳ ವ್ಯತ್ಯಾಸವಿದೆ. ಸರ್ಕಾರ ಚಿತ್ರರಂಗಕ್ಕೆ ಅಗತ್ಯ ಎಲ್ಲ ಸವಲತ್ತು ನೀಡಲು ಬದ್ಧವಾಗಿದೆ. ಸ್ಯಾಂಡಲ್‌ವುಡ್‌ಗೆ ಹೊಸ ಕಿರೀಟ ನೀಡಬೇಕೆಂಬ ಆಲೋಚನೆಯಿದೆ. ಅದಕ್ಕೆ ನಾವೆಲ್ಲ ಒಟ್ಟಾಗಿ ಕೆಲಸ ಮಾಡೋಣ. ಬ್ರ್ಯಾಂಡ್‌ ಬೆಂಗಳೂರಿಗಾಗಿ, ಚಿತ್ರರಂಗಕ್ಕೆ ಹೊಸ ರೂಪ ಕೊಡಲು ಕೆಲಸ ಮಾಡಿ’ ಎಂದು ಡಿಕೆಶಿ ಕರೆ ನೀಡಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.