ADVERTISEMENT

Sandalwood | ಉತ್ತರ ಕರ್ನಾಟಕದ ‘ಲಕ್ಷ್ಯ’

​ಪ್ರಜಾವಾಣಿ ವಾರ್ತೆ
Published 30 ಜೂನ್ 2025, 0:30 IST
Last Updated 30 ಜೂನ್ 2025, 0:30 IST
ಚಿತ್ರತಂಡ
ಚಿತ್ರತಂಡ   

ಬಹುತೇಕ ಉತ್ತರ ಕರ್ನಾಟಕದ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ಮಕ್ಕಳ ಚಿತ್ರ ‘ಲಕ್ಷ್ಯ’ದ ಟ್ರೇಲರ್ ಮತ್ತು ಹಾಡುಗಳು ಇತ್ತೀಚೆಗಷ್ಟೇ ಬಿಡುಗಡೆಗೊಂಡಿವೆ. ಅರ್ಜುನ ಪಿ. ಡೊಣೂರ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಜತೆಗೆ ಬಂಡವಾಳವನ್ನೂ ಹೂಡಿದ್ದಾರೆ. 

‘ಲಕ್ಷ್ಯ’ ಎಂದರೆ, ಗಮನ ಕೊಡುವುದು ಎಂಬ ಅರ್ಥವಿದೆ. ಇದು ಮಕ್ಕಳ ‘ಲಕ್ಷ್ಯ’ದ ಕುರಿತು ಮಾಡಲಾದ ಚಿತ್ರ. ಮಕ್ಕಳು ಯಾವ ವಿಷಯಕ್ಕೆ ‘ಲಕ್ಷ್ಯ’ ಕೊಡುತ್ತಾರೆ, ಅದರಿಂದ ಏನಾಗುತ್ತದೆ ಎಂಬುದೇ ಈ ಚಿತ್ರದ ಕಥಾಹಂದರ. ಸಂಪೂರ್ಣ ಉತ್ತರ ಕರ್ನಾಟಕದ ಭಾಷೆ, ಅಲ್ಲಿನ ಕಲಾವಿದರೇ ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಈಗಾಗಲೇ ಈ ಚಿತ್ರದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ಚಿತ್ರವನ್ನು ತೆರೆಗೆ ತರುವ ಯೋಚನೆಯಿದೆ’ ಎಂದರು ನಿರ್ದೇಶಕರು.

ಮೂರು ಹಾಡುಗಳಿಗೆ ಆರವ್ ರಿಶಿಕ್ ಸಂಗೀತ ಸಂಯೋಜಿಸಿದ್ದು, ಅನಿರುದ್ದ ಶಾಸ್ತ್ರೀ, ಮದ್ವೇಶ್ ಭಾರದ್ವಾಜ್, ಚೇತನ್ ನಾಯಕ್ ಚಿತ್ರದ ಗೀತೆಗಳಿಗೆ ಧ್ವನಿಯಾಗಿದ್ದಾರೆ. ಎಂ.ಬಿ.ಅಳ್ಳಿಕಟ್ಟಿ ಛಾಯಾಚಿತ್ರಗ್ರಹಣ, ಆರ್. ಮಹಾಂತೇಶ್ ಸಂಕಲನವಿದೆ.  ಬಾಗಲಕೋಟೆ, ಕೂಡಲ ಸಂಗಮ ಸುತ್ತಮುತ್ತ ಬಹುತೇಕ ಚಿತ್ರೀಕರಣ ನಡೆಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.