ADVERTISEMENT

ನಟಿ ಅನುಪಮಾ ಪರಮೇಶ್ವರನ್‌ಗೆ ಕೋವಿಡ್‌ ದೃಢ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಆಗಸ್ಟ್ 2022, 7:02 IST
Last Updated 28 ಆಗಸ್ಟ್ 2022, 7:02 IST
ಅನುಪಮಾ ಪರಮೇಶ್ವರನ್
ಅನುಪಮಾ ಪರಮೇಶ್ವರನ್   

ಕನ್ನಡದಲ್ಲಿನಟಸಾರ್ವಭೌಮ ಚಿತ್ರದಲ್ಲಿ ಅಭಿನಯಿಸಿದ್ದ ನಟಿ ಅನುಪಮಾ ಪರಮೇಶ್ವರನ್ ಅವರಿಗೆ ಕೋವಿಡ್‌ ದೃಢಪಟ್ಟಿದೆ.

ಕಾರ್ತಿಕೇಯ 2 ಚಿತ್ರದ ಪ್ರಚಾರಕ್ಕಾಗಿ ಹಲವು ಕಡೆ ತೆರಳಿದ್ದ ಅನುಪಮಾಗೆ ಶೀತ ಮತ್ತು ಜ್ವರದ ಲಕ್ಷಣಗಳು ಕಂಡು ಬಂದ ನಂತರ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದರು. ಅವರಿಗೆ ಕೋವಿಡ್‌ ಪಾಸಿಟಿವ್ ಬಂದಿರುವುದು ದೃಢಪಟ್ಟಿದೆ.

ಸದ್ಯ ಅನುಪಮಾ ಮನೆಯಲ್ಲಿ ಕ್ವಾರಂಟೈನ್‌ನಲ್ಲಿದ್ದಾರೆ. ತಮ್ಮ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಮನವಿ ಮಾಡಿದ್ದಾರೆ.

ADVERTISEMENT

ಸತತ ಸೋಲುಗಳಿಂದ ನೃತ್ಯ ಹಾಗೂ ಅತಿಥಿ ಪಾತ್ರಕ್ಕೆ ಸೀಮಿತರಾಗಿದ್ದ ನಟಿ ಅನುಪಮಾ ಪರಮೇಶ್ವರನ್ ಅವರಿಗೆ ಕಾರ್ತಿಕೇಯ 2 ಚಿತ್ರ ಯಶಸ್ಸು ತಂದುಕೊಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.