ಬಾಲಿವುಡ್ ನಟ ಅಮೀರ್ ಖಾನ್ ಪುತ್ರಿ ಇರಾ ಖಾನ್ ತಮ್ಮ ಬಹುಕಾಲದ ಗೆಳೆಯ ನೂಪುರ್ ಶಿಖಾರೆ ಜತೆ ಪ್ರೇಮ ನಿವೇದನೆ ಮಾಡಿಕೊಂಡಿದ್ದಾರೆ.
ಸಾರ್ವಜನಿಕವಾಗಿ ಇರಾ ಖಾನ್‌ಗೆ ಫ್ರೆಂಚ್ ಕಿಸ್ ಕೊಟ್ಟು, ಉಂಗುರಹಾಕಿದ್ದಾರೆ. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ಕಳೆದ ಮೂರು ವರ್ಷಗಳಿಂದ ಇರಾ ಹಾಗೂ ನೂಪುರ್ ಡೇಟಿಂಗ್ ಮಾಡುತ್ತಿದ್ದಾರೆ.ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಇವರು ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ.
‘ನೀನು ನನ್ನನ್ನು ಮದುವೆ ಆಗುತ್ತೀಯಾ’ ಎಂದು ಇರಾಗೆ ನೂಪುರ್ ಕೇಳುತ್ತಾರೆ. ಇದಕ್ಕೆ ಇರಾ 'ಯೆಸ್' ಎಂದು ಹೇಳುತ್ತಾರೆ. ನಂತರ ಇಬ್ಬರೂ ಫ್ರೆಂಚ್ ಕಿಸ್ ಮಾಡಿ ಆ ಕ್ಷಣವನ್ನು ಸಂಭ್ರಮಿಸಿದ್ದಾರೆ.
ಇರಾ ಈ ವಿಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು, 'ನಾನು ಇದಕ್ಕೆ ಒಪ್ಪಿಕೊಂಡಿರುವೆ' ಎಂದು ಬರೆದುಕೊಂಡಿದ್ದಾರೆ.ಅಭಿಮಾನಿಗಳು ಸೇರಿದಂತೆ ಸೆಲೆಬ್ರಿಟಿಗಳು ಇರಾಗೆಶುಭಾಶಯಗಳನ್ನು ಹೇಳುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.