ADVERTISEMENT

₹60 ಕೋಟಿಗೂ ಅಧಿಕ ಗಳಿಕೆ ಕಂಡ ಶಾಹಿದ್ ಕಪೂರ್ ನಟನೆಯ ‘ಓ ರೋಮಿಯೋ’ ಚಿತ್ರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಫೆಬ್ರುವರಿ 2026, 9:01 IST
Last Updated 18 ಫೆಬ್ರುವರಿ 2026, 9:01 IST
   

ನವದೆಹಲಿ: ಬಾಲಿವುಡ್ ನಟ ಶಾಹಿದ್ ಕಪೂರ್  ಹಾಗೂ ತೃಪ್ತಿ ಧಿಮ್ರಿ ನಟನೆಯ ‘ಓ ರೋಮಿಯೋ’ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಫೆ.3ರಂದು ಬಿಡುಗಡೆಯಾದ ಈ ಚಿತ್ರವು ಗಲ್ಲಾ ಪೆಟ್ಟಿಗೆಯಲ್ಲಿ ₹60 ಕೋಟಿಗೂ ಅಧಿಕ ಗಳಿಕೆ ಕಂಡಿದೆ.

ಈ ಚಿತ್ರವನ್ನು ನಾಡಿಯಾಡ್‌ವಾಲಾ ಗ್ರ್ಯಾಂಡ್‌ಸನ್ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿ ಸಾಜಿದ್ ನಾಡಿಯಾಡ್‌ವಾಲಾ ಅವರು ನಿರ್ಮಾಣ ಮಾಡಿದ್ದಾರೆ. ವಿಶಾಲ್ ಭಾರದ್ವಾಜ್ ಅವರು ನಿರ್ದೇಶನ ಮಾಡಿದ್ದಾರೆ.

‘ಓ ರೋಮಿಯೋ’ ಕುರಿತು ನಿರ್ಮಾಪಕ ಸಾಜಿದ್ ನಾಡಿಯಾಡ್‌ವಾಲಾ ಅವರು ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ, ‘ಈ ಚಿತ್ರವನ್ನು ವೀಕ್ಷಿಸಿದ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರತಂಡದ ಬಗ್ಗೆ ಹೆಮ್ಮೆ ಇದೆ‘ ಎಂದು ಬರೆದುಕೊಂಡಿದ್ದಾರೆ.

ADVERTISEMENT

ಆಕ್ಷನ್, ಥ್ರಿಲ್ಲರ್ ‘ಓ ರೋಮಿಯೋ’ ಚಿತ್ರದಲ್ಲಿ ನಟ ಶಾಹಿದ್ ಕಪೂರ್ ಅವರು ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಮುಂಬೈ ನಗರದ ದಿನನಿತ್ಯದ ಸುದ್ದಿ ಆಧರಿಸಿ ಈ ಚಿತ್ರಕಥೆ ಬರೆಯಲಾಗಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. 

‘ಓ ರೋಮಿಯೋ’ ಚಿತ್ರದಲ್ಲಿ ಅವಿನಾಶ್ ತಿವಾರಿ, ದಿಶಾ ಪಟಾನಿ, ವಿಕ್ರಾಂತ್ ಮಾಸ್ಸಿ ಸೇರಿ ಅನೇಕರು ಕಾಣಿಸಿಕೊಂಡಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.