ಬೆಂಗಳೂರು: ಯೂಟ್ಯೂಬರ್ ರಣವೀರ್ ಅಲಹಾಬಾದಿಯಾ ಅವರ ವಿವಾದಾತ್ಮಕ ಶೋ ಬಗ್ಗೆ ಮಾತನಾಡಲು ಹೋಗಿ ನಟಿ ರಾಖಿ ಸಾವಂತ್ ತೊಂದರೆಗೆ ಸಿಲುಕಿದ್ದಾರೆ.
ರಣವೀರ್ ಅಲಹಾಬಾದಿಯಾನ ವಿವಾದಾತ್ಮಕ ಶೋನಲ್ಲಿ ಭಾಗವಹಿಸಿದ್ದವರಿಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಉದ್ವೇಗಕ್ಕೊಳಗಾಗಿ ಮಾತನಾಡಿರುವ ರಾಖಿ ಸಾವಂತ್, ಮೊದಲು ಭಾರತದಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣಗಳನ್ನು ತನಿಖೆ ಮಾಡಿ ಮುಗಿಸ್ರಪ್ಪಾ ಎಂದು ಲೇವಡಿ ಮಾಡಿದ್ದರು.
ಅಲ್ಲದೇ ಯೂಟ್ಯೂಬರ್‌ಗಳನ್ನು ಬೆಂಬಲಿಸಿ ಮಾತನಾಡಿದ್ದರು.
ಈ ಬಗ್ಗೆ ಮುಂಬೈ ಪೊಲೀಸರು ರಾಖಿ ಸಾವಂತ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವೆಬ್‌ಸೈಟ್ ವರದಿ ಮಾಡಿದೆ.
ರಣವೀರ್, ಸಮಯ್ ರೈನಾ ಅವರ ಯುಟ್ಯೂಬ್ ರಿಯಾಲಿಟಿ ಶೋ ‘ಇಂಡಿಯಾಸ್ ಗಾಟ್ ಲೆಟೆಂಟ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದು ಕಾಮಿಡಿ ರಿಯಾಲಿಟಿ ಶೋ ಆಗಿದೆ.
ಈ ವೇಳೆ ರಣವೀರ್, ಸ್ಪರ್ಧಿಯೊಬ್ಬರ ಬಳಿ ಪೋಷಕರು ಮತ್ತು ಲೈಂಗಿಕತೆಯ ಬಗ್ಗೆ ಕೇಳಿದ್ದಾರೆ. ಇದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ನೆಟ್ಟಿಗರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ರಣವೀರ್ ಅವರ ಪಾಡ್‌ಕಾಸ್ಟ್‌ಅನ್ನು ನಿಷೇಧಿಸುವಂತೆ ಆಗ್ರಹಿಸಿದ್ದಾರೆ. ಅಲ್ಲದೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಸೇರಿ ವಿರೋಧ ಪಕ್ಷಗಳ ನಾಯಕರೂ ರಣವೀರ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪೊಲೀಸರು ದೂರ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.