ADVERTISEMENT

ಮಾರ್ಚ್‌ಗೆ ‘ಒಂದಂಕೆ ಕಾಡು’

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2023, 18:46 IST
Last Updated 7 ಫೆಬ್ರುವರಿ 2023, 18:46 IST
ರಾಮಚಂದ್ರ ವೈದ್ಯ
ರಾಮಚಂದ್ರ ವೈದ್ಯ   

ಕಾಡಿನ ನಿಗೂಢತೆ ತೆರೆಯಲು ಪ್ರಯತ್ನಿಸಿದೆ ‘ಒಂದಂಕೆ ಕಾಡು’. ಕಿರುತೆರೆ ನಿರ್ದೇಶಕ ರಾಮಚಂದ್ರ ವೈದ್ಯ ಅವರಿಗೆ ಈ ಚಿತ್ರದ ಮೂಲಕ ಬೆಳ್ಳಿತೆರೆಗೆ ಬಡ್ತಿ ಸಿಕ್ಕಿದೆ.

ಈ ಚಿತ್ರದ ಕಥೆಯೂ ರಾಮಚಂದ್ರ ಅವರದ್ದೇ. ಕನ್ನಡ ಮತ್ತು ತೆಲುಗಿನಲ್ಲಿ ಈ ಚಿತ್ರ ಏಕಕಾಲಕ್ಕೆ ತೆರೆ ಕಾಣಲಿದೆ. ತೆಲುಗಿನಲ್ಲಿ ‘ಅನಗನಗಾ ಒಕ ಅಡವಿ’ ಎಂಬ ಹೆಸರಿನಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ರಥರ್ವ, ಸೋನಿ, ಮಧು ಹೆಗ್ಡೆ, ಸುಮಂತ್ ಭಟ್, ಪ್ರೇರಣಾ ಕಂಬಂ ಮುಖ್ಯ ಭೂಮಿಕೆಯಲ್ಲಿದ್ದಾರೆ. ರಾಮಚಂದ್ರ ವೈದ್ಯ ಅವರಿಗೆ ಸೂಪರ್ ಸ್ಟಾರ್ ರಜನಿಕಾಂತ್ ಶುಭ ಹಾರೈಸಿದ್ದಾರೆ.

ಕಾಡು ಬಗೆದಷ್ಟು ನಿಗೂಢವೆನಿಸುವ ಸೃಷ್ಟಿ. ಮೇಲ್ನೋಟಕ್ಕೆ ತಣ್ಣಗೆ, ಹಸಿರಾಗಿ ಕಾಣುವ ಕಾಡಿನ ಒಳಹೊಕ್ಕರೆ ಊಹೆಗೂ ಮೀರಿದ ವಿಷಯಗಳು, ವಿವರಗಳು ಕಾಣಸಿಗುತ್ತವೆ. ಈಗ ಇದೇ ಕಥಾವಸ್ತುವಿನ ಮೇಲೆ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಮಾಡಿದ್ದೇವೆ ಅನ್ನುತ್ತಾರೆ ರಾಮಚಂದ್ರ. ರಜನಿಕಾಂತ್‌ ಅವರ ಶುಭಾಶಯ ಸಿಕ್ಕಿದ್ದು ರಾಮಚಂದ್ರ ಅವರಿಗೆ ಖುಷಿಯಾಗಿದೆಯಂತೆ.

ADVERTISEMENT

‘ಶ್ರೀ ಮಹಾಕಾಳಿ ಪ್ರೊಡಕ್ಷನ್ಸ್' ನಿರ್ಮಾಣದ ಚೊಚ್ಚಲ ಚಿತ್ರ ಇದಾಗಿದೆ. ಗಣೇಶ್ ಹೆಗ್ಡೆ ಅವರ ಛಾಯಾಗ್ರಹಣವಿದೆ. ಶ್ರೀಕಾಂತ್ ಸಂಕಲನ, ಟಿ.ಜಿ. ನಂದೀಶ್ ಸಂಭಾಷಣೆ, ಮಧು ಹೆಗ್ಡೆ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಹೃದಯಶಿವ, ಡಾ. ಉಮೇಶ್ ಸಾಹಿತ್ಯ, ಅನುರಾಧಾ ಭಟ್, ಕಪಿಲ್ ನಾಯರ್, ಕೀರ್ತನ್ ಹೊಳ್ಳ ಹಿನ್ನೆಲೆ ಗಾಯನ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.