ಎ.ಆರ್.ರೆಹಮಾನ್
ಚೆನ್ನೈ: ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
‘ಲಂಡನ್‌ನಿಂದ ಹಿಂದಿರುಗಿದ ನಂತರ ಅನಾರೋಗ್ಯ ಕಾಣಿಸಿಕೊಂಡಿದ್ದು, ಶನಿವಾರ ರಾತ್ರಿಯೇ ತಪಾಸಣೆಗೆಗಾಗಿ ಆಸ್ಪತ್ರೆಗೆ ಹೋಗಿದ್ದರು. ನಿರ್ಜಲೀಕರಣದಿಂದ ಅಸ್ವಸ್ಥತೆ ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ. ರಂಜಾನ್ ಉಪವಾಸದಲ್ಲಿರುವುದರಿಂದ ಅದು ಮತ್ತಷ್ಟು ಉಲ್ಬಣಗೊಂಡಿದೆ’ ಎಂದು ರೆಹಮಾನ್ ವಕ್ತಾರರೊಬ್ಬರು ತಿಳಿಸಿದ್ದಾಗಿ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಅವರೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ರೆಹಮಾನ್ ಅವರ ಆಪ್ತ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.