ADVERTISEMENT

Oscars 2023 | ನಾಟು ನಾಟು ಹಾಡಿಗೆ ಆಸ್ಕರ್‌ ಪ್ರಶಸ್ತಿ

ಎಸ್‌ ಎಸ್‌ ರಾಜಮೌಲಿ ನಿರ್ದೇಶನದ ಆರ್‌ಆರ್‌ಆರ್‌ ಸಿನಿಮಾದ ಹಾಡು

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2023, 9:26 IST
Last Updated 13 ಮಾರ್ಚ್ 2023, 9:26 IST
ಆಸ್ಕರ್‌ ಪ್ರಶಸ್ತಿ ಸ್ವೀಕರಿಸಿದ ಕೀರವಾಣಿ ಹಾಗೂ ಚಂದ್ರಬೋಸ್‌
ಆಸ್ಕರ್‌ ಪ್ರಶಸ್ತಿ ಸ್ವೀಕರಿಸಿದ ಕೀರವಾಣಿ ಹಾಗೂ ಚಂದ್ರಬೋಸ್‌    

ನವದೆಹಲಿ: ಎಸ್.ಎಸ್‌ ರಾಜಮೌಳಿ ನಿರ್ದೇಶನದ ಆರ್‌.ಆರ್‌.ಆರ್ ಸಿನಿಮಾದ ‘ನಾಟು ನಾಟು‘ ಹಾಡಿಗೆ ಆಸ್ಕರ್‌ ಪ್ರಶಸ್ತಿ ಒಲಿದಿದೆ.

ಅತ್ಯುತ್ತಮ ಮೂಲ ಹಾಡು ವಿಭಾಗದಲ್ಲಿ ಈ ಹಾಡು ಪ್ರಶಸ್ತಿ ಬಾಚಿಕೊಂಡಿದೆ.

ಇದು ಈ ಚಿತ್ರಕ್ಕೆ ಲಭಿಸಿದ ಮೂರನೇ ಅಂತಾರಾಷ್ಟ್ರೀಯ ಗೌರವವಾಗಿದೆ. ಈ ಹಿಂದೆ ‌ಗೋಲ್ಡನ್‌ ಗ್ಲೋಬ್‌ ಹಾಗೂ ಕ್ರಿಟಿಕ್‌ ಚಾಯ್ಸ್‌ ಅವಾರ್ಡ್‌ಗೆ ಈ ಹಾಡು ಪಾತ್ರವಾಗಿತ್ತು.

ADVERTISEMENT

ಚಂದ್ರಬೋಸ್‌ ಬರೆದಿರುವ ಈ ಹಾಡಿಗೆ ಎಂ.ಎಂ ಕೀರವಾಣಿಯವರು ಸಂಗೀತ ಸಂಯೋಜನೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.