ADVERTISEMENT

OTT Releases: ಅ. 17 ರಂದು ಒಟಿಟಿಗೆ ಬರಲಿದೆ ಏಳುಮಲೆ: ಎಲ್ಲಿ ನೋಡಬಹುದು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಅಕ್ಟೋಬರ್ 2025, 12:33 IST
Last Updated 8 ಅಕ್ಟೋಬರ್ 2025, 12:33 IST
<div class="paragraphs"><p>ಏಳುಮಲೆ </p></div>

ಏಳುಮಲೆ

   

ನಟ ರಾಣಾ ಹಾಗೂ ನಟಿ ಪ್ರಿಯಾಂಕಾ ಆಚಾರ್ ಅಭಿನಯದ ಏಳುಮಲೆ ಸಿನಿಮಾ ಸೆಪ್ಟೆಂಬರ್ 5 ರಂದು ಬಿಡುಗಡೆಯಾಗಿತ್ತು. ಮಾತ್ರವಲ್ಲ, ರಿಲೀಸ್ ಆದ ಮೊದಲ ದಿನವೇ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಇದೀಗ ಈ ಸಿನಿಮಾ ಇದೇ ಅಕ್ಟೋಬರ್ 17 ರಂದು ಒಟಿಟಿಗೆ ಬರಲಿದ್ದು, ಬೆಳ್ಳಿ ತೆರೆ ಮೇಲೆ ಸಿನಿಮಾ ವೀಕ್ಷಣೆ ಮಿಸ್ ಮಾಡಿಕೊಂಡವರು ಓಟಿಟಿಯಲ್ಲಿ ನೋಡಬಹುದು.

ಎಲ್ಲಿ ನೋಡಬಹುದು?

ADVERTISEMENT

ಏಳುಮಲೆ ಸಿನಿಮಾವನ್ನು ಜೀ 5 ಓಟಿಟಿ ಫ್ಲಾಟ್‌ಫಾರ್ಮ್‌ನಲ್ಲಿ ಅಕ್ಟೋಬರ್ 17ರಂದು ಬಿಡುಗಡೆ ಮಾಡಲಾಗುತ್ತಿದೆ. ಈ ಕುರಿತು ಜೀ-5 ನೀಡಿರುವ ಅಧಿಕೃತ ಮಾಹಿತಿಯ ವಿಡಿಯೊವನ್ನು ಚಿತ್ರದ ನಿರ್ಮಾಪಕ ತರುಣ್ ಸುಧೀರ್ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಪುನೀತ್ ರಂಗಸ್ವಾಮಿ ಈ ಸಿನಿಮಾವನ್ನು ನಿರ್ದೇಶಿಸಿದ್ದು, ಸಿನಿಮಾ ಪ್ರೇಕ್ಷಕರು ಹಾಗೂ ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ದೊಡ್ಡಮಟ್ಟದಲ್ಲಿ ಪ್ರೇಕ್ಷಕರನ್ನು ಸೆಳೆಯುವಲ್ಲಿ ವಿಫಲವಾದರೂ ಸಿನಿಮಾ ತಕ್ಕಮಟ್ಟಿಗೆ ಗೆದ್ದಿತ್ತು. ರಾಣಾ ಹಾಗೂ ಪ್ರಿಯಾಂಕಾ ಆಚಾರ್ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜಗಪತಿ ಬಾಬು, ಕಿಶೋರ್, ನಾಗಾಭರಣ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.