ADVERTISEMENT

ಹಿರಿಯ ನಟ ಸುಚೇಂದ್ರ ಪ್ರಸಾದ ನಿರ್ದೇಶನದ ‘ಪದ್ಮಗಂಧಿ’ ಟ್ರೇಲರ್ ಬಿಡುಗಡೆ

ಪ್ರಜಾವಾಣಿ ವಿಶೇಷ
Published 30 ಜುಲೈ 2025, 23:30 IST
Last Updated 30 ಜುಲೈ 2025, 23:30 IST
ಪರಿಪೂರ್ಣ ಚಂದ್ರಶೇಖರ್‌
ಪರಿಪೂರ್ಣ ಚಂದ್ರಶೇಖರ್‌   

ಹಿರಿಯ ನಟ ಸುಚೇಂದ್ರ ಪ್ರಸಾದ ಚಿತ್ರಕಥೆ-ಸಂಭಾಷಣೆ ಬರೆದು ನಿರ್ದೇಶಿಸಿರುವ ‘ಪದ್ಮಗಂಧಿ’ ಚಿತ್ರದ ಟ್ರೇಲರ್‌ ಮತ್ತು ಹಾಡುಗಳು ಇತ್ತೀಚೆಗಷ್ಟೇ ಬಿಡುಗಡೆಗೊಂಡಿವೆ. ಎಸ್.ಆರ್.ಲೀಲಾ ಕಥೆ ಬರೆದು ಚಿತ್ರವನ್ನು ನಿರ್ಮಿಸಿದ್ದಾರೆ. ಕನ್ನಡ, ಸಂಸ್ಕೃತ ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರ ಸಿದ್ಧಗೊಂಡಿದೆ.

‘ಸಿನಿಮಾವು ಆದಿಯಿಂದ ಅಂತ್ಯದವರೆಗೂ ಪದ್ಮಗಂಧಿಯ ಪರಿಮಳ ಪಸರಿಸುತ್ತದೆ. ದೈವೀಕ ಗಂಧ ಮೆತ್ತಿಕೊಂಡಿರುವ ಕಮಲದ ಹೂವಿನ ಬಗ್ಗೆಯೇ ಕಥೆ ಇದೆ. ಕಮಲದ ಕುರಿತ ವಿಚಾರಗಳನ್ನು ಸಂಶೋಧಿಸಿ ಸನ್ನಿವೇಶಗಳಲ್ಲಿ ಕಟ್ಟಿಕೊಡಲಾಗಿದೆ. ನಿರ್ದೇಶಕರು ಕಥೆಯನ್ನು ನನ್ನ ಮನಸ್ಸಿನಲ್ಲಿರುವಂತೆ ತೆರೆಮೇಲೆ ತೋರಿಸಿದ್ದಾರೆ’ ಎಂದರು ಎಸ್.ಆರ್.ಲೀಲಾ.

‘ಕಮಲ ಯಾಕೆ ರಾಷ್ಟ್ರೀಯ ಪುಷ್ಪವಾಯ್ತು, ಒಂದು ಪಕ್ಷಕ್ಕೆ ಲಾಂಛನವಾಯ್ತು, ಬ್ರಹ್ಮ ಯಾಕೆ ಇದರ ಮೇಲೆ ಕುಳಿತುಕೊಳ್ಳುತ್ತಾನೆ, ಆಯುರ್ವೇದಕ್ಕೆ ಇದು ಯಾಕೆ ಬೇಕು? ಎಂದು ನೋಡುತ್ತ ಹೋದಾಗ ಕಮಲಕ್ಕೆ 36,000ಕ್ಕೂ ಹೆಚ್ಚು ಪರ್ಯಾಯ ನಾಮಗಳಿವೆ ಎಂದು ಕೇಳಿ ಅಚ್ಚರಿಯಾಯ್ತು. ಪದ್ಮ ಸಂಬಂಧಿ ಎಂಬ ಅರ್ಥದಲ್ಲಿ ಈ ಸಿನಿಮಾ ಮಾಡಲಾಗಿದೆ’ ಎನ್ನುತ್ತಾರೆ ಸುಚೇಂದ್ರ ಪ್ರಸಾದ.

ADVERTISEMENT

ಕು.ಮಹಾಪದ್ಮ, ಪರಿಪೂರ್ಣ ಚಂದ್ರಶೇಖರ್‌, ಶತಾವಧಾನಿ ಆರ್.ಗಣೇಶ್, ಗೌರಿ ಸುಬ್ರಹ್ಮಣ್ಯ ಮುಂತಾದವರು ಚಿತ್ರದಲ್ಲಿದ್ದಾರೆ. ದೀಪಕ್ ಪರಮಶಿವನ್ ಸಂಗೀತ, ಮನು ಯಪ್ಲಾರ್‌, ನಾಗರಾಜ್ ಅದ್ವಾನಿ, ಗಿರಿಧರ್‌ ದಿವಾನ್ ಛಾಯಾಚಿತ್ರಗ್ರಹಣ, ಎನ್.ನಾಗೇಶ್ ನಾರಾಯಣಪ್ಪ ಸಂಕಲನವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.