
ಪಲಾಶ್ ಮುಚ್ಚಲ್, ಬಾಲಿವುಡ್ ನಟಿ ಡೈಸಿ ಶಾ
ಚಿತ್ರ: ಇನ್‌ಸ್ಟಾಗ್ರಾಂ
ಇತ್ತೀಚೆಗೆ ಭಾರತ ಮಹಿಳಾ ಕ್ರಿಕೆಟ್ ತಂಡದ ತಾರೆ ಸ್ಮೃತಿ ಮಂದಾನ ಅವರ ಮದುವೆ ರದ್ದಾಗಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದ ಪಲಾಶ್ ಈಗ ಬಾಲಿವುಡ್‌ನ ಥ್ರಿಲ್ಲರ್ ಸಿನಿಮಾವೊಂದನ್ನು ನಿರ್ದೇಶಿಸಲು ಮುಂದಾಗಿದ್ದಾರೆ. ಗಾಯಕ ಪಲಾಶ್ ಮುಚ್ಚಲ್ ಮದುವೆ ಮುರಿದುಬಿದ್ದ ಬೆನ್ನಲ್ಲೆ ಹೊಸ ಯೋಜನೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಪಲಾಶ್ ಮುಚ್ಚಲ್, ಬಾಲಿವುಡ್ ನಟಿ ಡೈಸಿ ಶಾ
ಹಿಂದಿ ಮತ್ತು ಮರಾಠಿ ಚಿತ್ರಗಳಲ್ಲಿ ಹಾಸ್ಯ ಪಾತ್ರಗಳಿಗೆ ಹೆಸರುವಾಸಿಯಾಗಿರುವ ನಟ, ನಿರ್ಮಾಪಕ ಮತ್ತು ನಿರ್ದೇಶಕ ಶ್ರೇಯಸ್ ತಲ್ಪಡೆ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಶ್ರೇಯಸ್ ಅವರಿಗೆ ಬಾಲಿವುಡ್ ಖ್ಯಾತ ನಟಿ ಡೈಸಿ ಶಾ ಜೋಡಿಯಾಗಲಿದ್ದಾರೆ. ಈ ಕುರಿತು ಸಿನಿಮಾ ನಿರ್ದೇಶಕ ಪಲಾಶ್ ಮುಚ್ಚಲ್ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಹೆಸರು ಅಂತಿಮವಾಗದ ಈ ಥ್ರಿಲ್ಲರ್ ಸಿನಿಮಾದ ಚಿತ್ರೀಕರಣ ಶೀಘ್ರದಲ್ಲೇ ಪ್ರಾರಂಭವಾಗುವ ನಿರೀಕ್ಷೆಯಿದೆ. ಈ ಚಿತ್ರದಲ್ಲಿ ತಲ್ಪಡೆ ಒಬ್ಬ ಸಾಮಾನ್ಯ ವ್ಯಕ್ತಿಯ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಸಿನಿಮಾಗಳಲ್ಲಿ ಯಾರೆಲ್ಲಾ ಇರಲಿದ್ದಾರೆ ಎಂಬುವುದರ ಕುರಿತು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.